Kannada Beatz
News

ವಸಿಷ್ಠ ಸಿಂಹ ‘ಲವ್ ಲಿ’ ಗೆ ಜೋಡಿಯಾದ ಜಾರ್ಖಂಡ್ ಮೂಲದ ಸ್ಟೆಫಿ ಪಟೇಲ್

ಸ್ಯಾಂಡಲ್ ವುಡ್ ಟ್ಯಾಲೆಂಟೆಡ್ ನಟ ವಸಿಷ್ಠ ಸಿಂಹ. ನಟನೆ ಅಂತ ಬಂದ್ರೆ ರೋಸ್ ಹಿಡಿದು ಹೀರೋ ಆಗೋಕು ರೆಡಿ, ಲಾಂಗ್ ಹಿಡಿದು ವಿಲನ್ ಆಗೋಕೂ ಸೈ, ಅಷ್ಟೇ ಅಲ್ಲ ಗಾಯನಕ್ಕೂ ಸೈ ಎನಿಸಿಕೊಂಡಿರುವ ಕಂಚಿನ ಕಂಠದ ನಟ. ಶಿವಣ್ಣನ ಜೊತೆ ಟಗರು ನಲ್ಲಿ ಚಿಟ್ಟೆಯಾಗಿ ಮಿಂಚಿದ ವಸಿಷ್ಠ ಸಿಂಹ ಸ್ಟೈಲಿಶ್ ಲುಕ್ ನಲ್ಲಿ ‘ಲವ್ ಲಿ’ ಯಾಗಿ ಕಾಣಿಸಿಕೊಳ್ಳುತ್ತಿರೋದು ನಿಮಗೆಲ್ಲ ಗೊತ್ತೇ ಇದೆ. ವಸಿಷ್ಠ ನಾಯಕ ನಟನಾಗಿ ನಟಿಸುತ್ತಿರುವ ‘ಲವ್ ಲಿ’ ಸೆಟ್ಟೇರಿ ಚಿತ್ರೀಕರಣದಲ್ಲಿ ಚಿತ್ರತಂಡ ಬ್ಯುಸಿಯಾಗಿದೆ. ಚಿತ್ರದ ಫಸ್ಟ್ ಲುಕ್ ಪೋಸ್ಟರ್, ಅಪ್ ಡೇಟ್ ಗಳು ಕೂಡ ಗಮನ ಸೆಳೆಯುತ್ತಿವೆ.

ಈ ಚಿತ್ರಕ್ಕೆ ವಸಿಷ್ಠ ಸಿಂಹ ಜೊತೆ ತೆರೆ ಹಂಚಿಕೊಳ್ಳುವರ್ಯಾರು ಎಂಬ ಕುತೂಹಲ ಎಲ್ಲರಲ್ಲಿತ್ತು. ಆ ಕುತೂಹಲಕ್ಕೀಗ ಬ್ರೇಕ್ ಬಿದ್ದಿದೆ. ವಸಿಷ್ಠ ಸಿಂಹನಿಗೆ ನಾಯಕಿಯಾಗಿ ಜಾರ್ಖಂಡ್ ಮೂಲದ ಸ್ಟೆಫಿ ಪಟೇಲ್ ಆಯ್ಕೆಯಾಗಿದ್ದಾರೆ. ಹಿಂದಿ, ಕೊರಿಯನ್, ತಮಿಳು ಭಾಷೆಗಳ ಸಿನಿಮಾ ಮತ್ತು ವೆಬ್ ಸಿರೀಸ್ ಗಳಲ್ಲಿ ನಟಿಸಿರುವ ಸ್ಟೆಫಿ ಪಟೇಲ್ ಗೆ ಇದು ಮೊದಲ ಕನ್ನಡ ಸಿನಿಮಾ. ಈಗಾಗಲೇ ಸ್ಟೆಫಿ ಪಟೇಲ್ ‘ಲವ್ ಲಿ’ ಚಿತ್ರತಂಡ ಸೇರಿಕೊಂಡಿದ್ದು ಜುಲೈ 19ರಿಂದ ಚಿತ್ರದ ಸೆಕೆಂಡ್ ಶೆಡ್ಯೂಲ್ ಆರಂಭವಾಗಲಿದೆ. ವಸಿಷ್ಠ ಸಿಂಹ ಹಾಗೂ ಸ್ಟೆಫಿ ಕಾಂಬಿನೇಶನ್ ಒಳಗೊಂಡ ಪೋಸ್ಟರ್ ಜುಲೈ 21ರಂದು ಚಿತ್ರತಂಡ ರಿವೀಲ್ ಮಾಡಲಿದೆ.

‘ಲವ್ ಲಿ’ ಚಿತ್ರಕ್ಕೆ ಚೇತನ್ ಕೇಶವ್ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಇದೊಂದು ಕಮರ್ಶಿಯಲ್ ರೋಮ್ಯಾಂಟಿಕ್ ಲವ್ ಸ್ಟೋರಿ ಸಿನಿಮಾವಾಗಿದ್ದು, ರೌಡಿಸಂ ಕಥಾಹಂದರವೂ ಚಿತ್ರದಲ್ಲಿದೆ. ಚಿತ್ರವನ್ನು ಎಂ.ಆರ್ ರವೀಂದ್ರ ಕುಮಾರ್ ನಿರ್ಮಿಸುತ್ತಿದ್ದು, ಹರೀಶ್ ಕೊಮ್ಮೆ ಸಂಕಲನ, ಅಶ್ವಿನ್ ಕೆನಡಿ ಕ್ಯಾಮೆರಾ ವರ್ಕ್, ಅನೂಪ್ ಸೀಳಿನ್ ಸಂಗೀತ ನಿರ್ದೇಶನ ‘ಲವ್ ಲಿ’ ಚಿತ್ರಕ್ಕಿದೆ.

Related posts

ಎಂ.ಎಸ್ ಅಕ್ಷರ್ – ರೀಷ್ಮಾ ನಾಣಯ್ಯ ಅಭಿನಯದಲ್ಲಿ ಬಂತು “ಛೀ ಕಳ್ಳ” ಆಲ್ಬಂ ಸಾಂಗ್.

Kannada Beatz

‘ಪಾನಿ’ ಚಿತ್ರದ ಟ್ರೇಲರ್ ಗೆ ಭಾರಿ ಮೆಚ್ಚುಗೆ

administrator

ಟ್ರೈಲರ್ ನಲ್ಲಿ ಸೈಕೋಕಿಲ್ಲರ್ ‘ಸತ್ಯ’ಸಿನಿಮಾ

Kannada Beatz

Leave a Comment

Share via
Copy link
Powered by Social Snap