ನವೆಂಬರ್ ಒಂದರಿಂದ ಚಿತ್ರೀಕರಣ.
ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ನಾಯಕನಾಗಿ ನಟಿಸುತ್ತಿರುವ 35 ನೇ “ಮಾಫಿಯಾ”.
ಈ ಚಿತ್ರವನ್ನು ” ಮಮ್ಮಿ” ಚಿತ್ರದ ಖ್ಯಾತಿಯ ಲೋಹಿತ್ ನಿರ್ದೇಶಿಸುತ್ತಿದ್ದಾರೆ. ನವಂಬರ್ 1 ರಿಂದ ಚಿತ್ರೀಕರಣ ಆರಂಭವಾಗಲಿದೆ. ಬೆಂಗಳೂರು, ಮೈಸೂರು ಮತ್ತು ರಾಮೋಜಿ ಫಿಲ್ಮ್ ಸಿಟಿಯಲ್ಲಿ ಚಿತ್ರೀಕರಣ ನಡೆಯಲಿದೆ.
ಪ್ರಜ್ವಲ್ ಗೆ ನಾಯಕಿಯಾಗಿ ಅದಿತಿ ಪ್ರಭುದೇವ ನಟಿಸಲಿದ್ದಾರೆ. ಉಳಿದ ತಾರಾಬಳಗದ ಆಯ್ಕೆ ನಡೆಯುತ್ತಿದೆ.
ಬೆಂಗಳೂರು ಕುಮಾರ್ ಫಿಲಂಸ್ ಲಾಂಛನದಲ್ಲಿ ಕುಮಾರ್ ಬಿ ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ.
ಅನೂಪ್ ಸೀಳಿನ್ ಸಂಗೀತ ನಿರ್ದೇಶನವಿರುವ ಈ ಚಿತ್ರಕ್ಕೆ ಮಾಸ್ತಿ ಸಂಭಾಷಣೆ ಬರೆಯುತ್ತಿದ್ದಾರೆ. ಜೆಬಿನ್ ಜಾಕಬ್ ಈ ಚಿತ್ರದ ಛಾಯಾಗ್ರಹಕರು.