Kannada Beatz
News

ಪವಿತ್ರಾ ಲೋಕೇಶ್-ನರೇಶ್ ಪ್ರೇಮ್ ಕಹಾನಿ ಶುರುವಾಗಿದ್ದೇಗೆ…? ’ಮತ್ತೆ ಮದುವೆ’ ಟ್ರೇಲರ್ ರಿಲೀಸ್.

ಟಾಲಿವುಡ್ ನಟ ನರೇಶ್ ಹಾಗೂ ಪವಿತ್ರಾ ಲೋಕೇಶ್ ನಟಿಸಿರುವ ಮತ್ತೆ ಮದುವೆ ಸಿನಿಮಾದ ಟ್ರೇಲರ್ ರಿಲೀಸ್ ಆಗಿದೆ. ತಮ್ಮ ರಿಯಲ್ ಲೈಫ್ ಘಟನೆಯನ್ನು ಈ ಜೋಡಿ ಸಿನಿಮಾ ಮಾಡಿರುವುದು ಟ್ರೇಲರ್ ನಲ್ಲಿ ಗೊತ್ತಾಗುತ್ತಿದೆ. ಈ ಹಿಂದೆ ರಿಲೀಸ್ ಆಗಿದ್ದ ಟೀಸರ್ ಬಹಳ ಸದ್ದು ಮಾಡಿತ್ತು. ಅದರ ಬೆನ್ನಲ್ಲೇ ಈಗ ಬಿಡುಗಡೆಯಾಗಿರುವ ಮತ್ತೆ ಮದುವೆ ಮೊದಲ ನೋಟ ಸಂಚಲನ ಸೃಷ್ಟಿಸಿದೆ.

ಪವಿತ್ರಾ ಲೋಕೇಶ್ ಹಾಗೂ ನರೇಶ್ ನಡುವೆ ಪ್ರೀತಿ ಹುಟ್ಟಿದ್ದೇಗೆ? ಆ ಪ್ರೀತಿಗೆ ನರೇಶ್ ಮೂರನೇ ಪತ್ನಿ ರಮ್ಯಾ ರಘುಪತಿಯೇ ವಿಲನ್ ಆಗಿ ನಿಂತಿರುವುದು. ಈ ಮೂವರ ಜಗಳ ಹಾದಿ ಬೀದಿ ರಂಪವಾಗಿದ್ದು. ಮೈಸೂರು ಹೋಟೆಲ್ ನಲ್ಲಿ ನಡೆದ ಹೈಡ್ರಾಮಾ ಕಹಾನಿ. ಈ ವಯಸ್ಸಿನಲ್ಲಿ ನರೇಶ್ ಮತ್ತೆ ಪ್ರೀತಿಯಲ್ಲಿ ಬೀಳೋದು. ಜನ ಹೀಯಾಳಿಸೋದು. ಹೀಗೆ ನಾನಾ ವಿಷಯಗಳನ್ನು ಟ್ರೇಲರ್ ನಲ್ಲಿ ತೋರಿಸಲಾಗಿದೆ.

ಪ್ರತಿಷ್ಠಿತ ವಿಜಯ ಕೃಷ್ಣ ಮೂವೀಸ್ ಬ್ಯಾನರ್ ನಡಿ ನರೇಶ್ ನಿರ್ಮಾಣ ಮಾಡಿರುವ ಮತ್ತೆ ಮದುವೆ ಚಿತ್ರಕ್ಕೆ ಎಂ. ಎಸ್. ರಾಜು ಆಕ್ಷನ್ ಕಟ್ ಹೇಳಿದ್ದಾರೆ. ಇದೊಂದು ಫ್ಯಾಮಿಲಿ ಎಂಟರ್ಟೈನ್ಮೆಂಟ್ ಸಿನಿಮಾವಾಗಿದ್ದು ಎಂ.ಎಸ್. ರಾಜು ಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಜಯಸುಧ ಮತ್ತು ಶರತ್ ಬಾಬು ಚಿತ್ರದ ಪ್ರಮುಖ ಪಾತ್ರಗಳಿಗೆ ಬಣ್ಣಹಚ್ಚಿದ್ದಾರೆ. ವನಿತ ವಿಜಯಕುಮಾರ್, ಅನನ್ಯ ನಾಗೆಲ್ಲ, ರೋಶನ್, ರವಿವರ್ಮ, ಅನ್ನಪೂರ್ಣ, ಭದ್ರಂ, ಯುಕ್ತ, ಪ್ರವೀಣ್ ಯಂಡಮುರಿ ಹಾಗೂ ಮಧೂ ಒಳಗೊಂಡ ಬಹು ದೊಡ್ಡ ತಾರಾಬಳಗ ಚಿತ್ರದಲ್ಲಿದೆ.

ಸುರೇಶ್ ಬೊಬ್ಬಿಲಿ ಸಂಗೀತ ನಿರ್ದೇಶನ, ಅರುಲ್ ದೇವ್ ಹಿನ್ನೆಲೆ ಸಂಗೀತ, ಎಂ.ಎನ್ ಬಾಲ್ ರೆಡ್ಡಿ ಕ್ಯಾಮೆರಾ ವರ್ಕ್, ಜುನೈದ್ ಸಿದ್ದಿಕಿ ಸಂಕಲನ, ಅನಂತ ಶ್ರೀರಾಮ್ ಸಾಹಿತ್ಯ ಚಿತ್ರಕ್ಕಿದೆ. ಟೀಸರ್ ಮೂಲಕ ಸಂಚಲನ ಸೃಷ್ಟಿಸುತ್ತಿರುವ ಮತ್ತೆ ಮದುವೆ ಕನ್ನಡ ಹಾಗೂ ತೆಲುಗು ಎರಡು ಭಾಷೆಯಲ್ಲಿ ಮೂಡಿಬರ್ತಿದ್ದು, ಮೇ 26ಕ್ಕೆ ಬೆಳ್ಳಿಪರದೆಗೆ ಎಂಟ್ರಿ ಕೊಡಲಿದೆ.

Related posts

ದಳಪತಿ ವಿಜಯ್ 69ನೇ ಚಿತ್ರದ ಫಸ್ಟ್ ಲುಕ್ ರಿಲೀಸ್: ಕೊನೆಯ ಸಿನಿಮಾದ ಟೈಟಲ್ ಏನು?

administrator

ರಿವೀಲ್ ಆಯ್ತು ‘ದಸರಾ’ದಲ್ಲಿ ಕೀರ್ತಿ ಸುರೇಶ್ ಲುಕ್ – ಹಳ್ಳಿ ಹುಡುಗಿಯಾಗಿ ಮಿಂಚಲಿದ್ದಾರೆ ಮಹಾನಟಿ

Kannada Beatz

ದುಬೈ ನಲ್ಲಿ “ಜಸ್ಟ್ ಪಾಸ್”

Kannada Beatz

Leave a Comment

Share via
Copy link
Powered by Social Snap