ಅಮ್ಮಾ ಎಂಟರ್ ಪ್ರೈಸಸ್ ಮೂಲಕ ಕೋಟೆನಾಡು ಚಿತ್ರದುರ್ಗದ ಹೆಚ್.ಆನಂದಪ್ಪ ಅವರು ಅದ್ದೂರಿಯಾಗಿ ನಿರ್ಮಿಸಿರುವ ಚಿತ್ರ ಮೆಜೆಸ್ಟಿಕ್-2. ಹಿರಿಯ ನಿರ್ಮಾಪಕ ಶಿಲ್ಪಾ ಶ್ರೀನಿವಾಸ್ ಅವರ ಪುತ್ರ ಭರತ್ ಕುಮಾರ್ ಈ ಚಿತ್ರದಲ್ಲಿ ನಾಯಕನಾಗಿ ಕಾಣಿಸಿಕೊಂಡಿದ್ದಾರೆ. ಹಿರಿಯನಟಿ ಶೃತಿ ಅವರು ನಾಯಕನ ತಾಯಿ ಪಾತ್ರವನ್ನು ನಿಭಾಯಿಸಿದ್ದಾರೆ.
ಈಗಾಗಲೇ ಶೂಟಿಂಗ್ ಪೋಸ್ಟ್ ಪ್ರೊಡಕ್ಷನ್ ಕೆಲಸಗಳನ್ನು ಮುಗಿಸಿಕೊಂಡು ಬಿಡುಗಡೆಗೆ ಸಿದ್ದವಾಗಿರುವ ಈ ಚಿತ್ರವನ್ನು ಬರುವ ನವೆಂಬರ್ ನಲ್ಲಿ ರಿಲೀಸ್ ಮಾಡಲು ನಿರ್ಮಾಪಕರು ಸಿದ್ದತೆ ಮಾಡಿಕೊಂಡಿದ್ದಾರೆ.
ಇತ್ತೀಚೆಗಷ್ಟೇ ಈ ಚಿತ್ರವನ್ನು ವೀಕ್ಷಿಸಿದ ಸೆನ್ಸಾರ್ ಮಂಡಳಿ ಚಿತ್ರಕ್ಕೆ U/A ಸರ್ಟಿಫಿಕೇಟ್ ನೀಡಿದೆ.
ಈ ಚಿತ್ರಕ್ಕೆ ರಾಮು ಕಥೆ, ಚಿತ್ರಕಥೆ ಬರೆದು ಆಕ್ಷನ್ ಕಟ್ ಹೇಳಿದ್ದಾರೆ. ಯುವನಟ ಭರತ್ ಕುಮಾರ್, ಸಂಹಿತಾ ವಿನ್ಯಾ ನಾಯಕ, ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಈಗಿನ ಮೆಜೆಸ್ಟಿಕ್ ಏರಿಯಾ ಹೇಗಿದೆ, ಅಲ್ಲಿ ನಡೆಯುವ ದಂಧೆಗಳು, ಅಕ್ರಮ ಚಟುವಟಿಕೆಗಳು ಅಲ್ಲದೆ ಈಗಲೂ ಅಲ್ಲಿ ರೌಡಿಸಂ ಹೇಗೆ ನಡೆಯುತ್ತೆ ಎಂಬುದನ್ನು ಅಲ್ಲಿಯೇ ಹುಟ್ಟಿ ಬೆಳೆದ ಹುಡುಗನೊಬ್ಬನ ಕಥೆಯ ಮೂಲಕ ಮೆಜೆಸ್ಟಿಕ್-2 ಚಿತ್ರದಲ್ಲಿ ನಿರ್ದೇಶಕ ರಾಮು ಹೇಳಹೊರಟಿದ್ದಾರೆ.
ಈ ಚಿತ್ರಕ್ಕೆ ಬೆಂಗಳೂರಿನ ಮೆಜಸ್ಟಿಕ್, ರಾಮೋಹಳ್ಳಿ, ಹೆಚ್.ಎಂ.ಟಿ., ಮಾಕಳಿ ಬಳಿಯ ಸಕ್ರೆ ಅಡ್ಡ, ಆರ್.ಟಿ.ನಗರದ ನಿಸರ್ಗ ಹೌಸ್ ಅಲ್ಲದೆ ಚಿತ್ರದುರ್ಗದ ಮರುಘಾ ಮಠ ಸೇರಿದಂತೆ ಮುಂತಾದೆಡೆ ಚಿತ್ರೀಕರಣ ನಡೆಸಲಾಗಿದೆ. ವಿಶೇಷವಾಗಿ ಕನಸಿನ ರಾಣಿ ಮಾಲಾಶ್ರೀ ಅಭಿನಯದ ಹೀರೋ ಇಂಟ್ರಡಕ್ಷನ್ ಸಾಂಗನ್ನು ಆರ್.ಎಸ್. ಗೌಡ ಅವರ ಸ್ಟುಡಿಯೋದಲ್ಲಿ ಚಿತ್ರೀಕರಿಸಲಾಗಿದೆ.
ಚಿತ್ರದಲ್ಲಿ 5 ಹಾಡುಗಳಿದ್ದು, ವಿನು ಮನಸು
ಸಂಗೀತ ನಿರ್ದೇಶನ ಮಾಡಿದ್ದಾರೆ. ಛಾಯಾಗ್ರಾಹಕರಾಗಿ ವೀನಸ್ ಮೂರ್ತಿ, ಅಸೋಸಿಯೇಟ್ ಡೈರೆಕ್ಟರ್ ಆಗಿ ವಿಜಯಕುಮಾರ್, ಸಾಹಸ ನಿರ್ದೇಶಕರಾಗಿ ಚಿನ್ನಯ್ಯ ಕೆಲಸ ಮಾಡಿದ್ದಾರೆ.

