HomeNewsಜೀ5 ಒಟಿಟಿಯಲ್ಲಿ ಮಲಯಾಳಂನ 'ನುನಕುಳಿ' ಧಮಾಕ..100 ಮಿಲಿಯನ್ಸ್ ಸ್ಕ್ರೀಮಿಂಗ್ ಮಿನಿಟ್ ಕಂಡ ಬೇಸಿಲ್ ಜೋಸೆಫ್ ಸಿನಿಮಾ

ಜೀ5 ಒಟಿಟಿಯಲ್ಲಿ ಮಲಯಾಳಂನ ‘ನುನಕುಳಿ’ ಧಮಾಕ..100 ಮಿಲಿಯನ್ಸ್ ಸ್ಕ್ರೀಮಿಂಗ್ ಮಿನಿಟ್ ಕಂಡ ಬೇಸಿಲ್ ಜೋಸೆಫ್ ಸಿನಿಮಾ

ಒಟಿಟಿ ಪ್ಲಾಟ್ಫಾರ್ಮ್ ದಿನದಿಂದ ದಿನಕ್ಕೆ ದೊಡ್ಡದಾಗುತ್ತಿದೆ. ಹೊಸ ಸಿನಿಮಾಗಳನ್ನು ಖರೀದಿಸಿ ಪ್ರಸಾರ ಮಾಡುವಲ್ಲಿ ಅನೇಕ ಒಟಿಟಿ ಸಂಸ್ಥೆಗಳ ನಡುವೆ ಪೈಪೋಟಿ ಇದೆ. ಅದರಲ್ಲೂ ‘ಜೀ5’ ಸದಾಭಿರುಚಿ ಚಿತ್ರಗಳನ್ನು ಪ್ರೇಕ್ಷಕರಿಗೆ ನೀಡುವಲ್ಲಿ ಮೊದಲ ಸ್ಥಾನದಲ್ಲಿ ಕಾಣಿಸುತ್ತದೆ. ಇದೇ ಸೆಪ್ಟಂಬರ್ 13ರಂದು Zee5 ಒಟಿಟಿ ಪ್ಲಾಟ್‌ಫಾರ್ಮ್‌ನಲ್ಲಿ ಸ್ಟ್ರೀಮಿಂಗ್ ಕಂಡ ‘ನುನಕುಳಿ’ ಚಿತ್ರ ದಾಖಲೆ ಬರೆದಿದೆ. 100 ಮಿಲಿಯನ್ಸ್ ಸ್ಟ್ರೀಮಿಂಗ್ ಮಿನಿಟ್ ಕಾಣುವ ಮೂಲಕ ಹೊಸ ರೆಕಾರ್ಡ್ ಕ್ರಿಯೇಟ್ ಮಾಡಿದೆ. ಇತ್ತೀಚೆಗಷ್ಟೇ ಕೇರಳದ ನಡೆದ ಕ್ರೀಡಾ ಸಮಾರಂಭವೊಂದರಲ್ಲಿ ಅಲ್ಲಿ ಶಿಕ್ಷಣ ಮತ್ತು ಕಾರ್ಮಿಕ ಸಚಿವ ವಿ ಶಿವನ್‌ಕುಟ್ಟಿ ಅವರ ಸಮ್ಮುಖದಲ್ಲಿ ‘ನುನಕುಳಿ’ ಚಿತ್ರದ 10,000 ಸ್ಕ್ವೇರ್ ಫೀಟ್ ಪೋಸ್ಟರ್ ನ್ನು ಜೀ5 ಅನಾವರಣ ಮಾಡಿದೆ.

ಕ್ರೈಮ್ ಕಾಮಿಡಿ ಥ್ರಿಲ್ಲರ್ ಚಿತ್ರ ‘ನುನಕುಳಿ’ ಮಲಯಾಳಂ ಮಾತ್ರವಲ್ಲ ಕನ್ನಡ ಮತ್ತು ತೆಲುಗು ಭಾಷೆಗಳಲ್ಲಿಯೂ ವೀಕ್ಷಣೆ ಮಾಡಬಹುದು. ನುನಕುಳಿಯಲ್ಲಿ ಬೇಸಿಲ್ ಜೋಸೆಫ್, ಗ್ರೇಸ್ ಆಂಟೋನಿ, ಸಿದ್ದಿಕಿ, ಬೈಜು ಸಂತೋಷ್, ನಿಖಿಲಾ ವಿಮಲ್ ಪ್ರಮುಖ ಪಾತ್ರ ನಿರ್ವಹಿಸಿದ್ದಾರೆ. ದೃಶ್ಯಂ ಸೇರಿದಂತೆ ಹಲವು ಹಿಟ್ ಸಿನಿಮಾಗಳನ್ನು ನಿರ್ದೇಶಿಸಿರುವ ನಿರ್ದೇಶಕ ಜಿತು ಜೋಸೆಫ್ ನುನಕುಳಿ ಚಿತ್ರವನ್ನು ನಿರ್ದೇಶಿಸಿದ್ದಾರೆ. ಈ ಚಿತ್ರದ ಕಥೆಯು ಐಟಿ ಅಧಿಕಾರಿಯ ಲ್ಯಾಪ್‌ಟಾಪ್ ವಶಕ್ಕೆ ಪಡೆದಾಗ, ಆತ ಅದರಲ್ಲಿನ ಅಶ್ಲೀಲ ವಿಡಿಯೋಗಳನ್ನು ಹೇಗೆ ಯಾರಿಗೂ ಗೊತ್ತಾಗದ ಹಾಗೆ ತೆಗೆದುಹಾಕುತ್ತಾನೆ ಎಂಬುದೇ ತಿರುಳು.

Previous article
*’ರಾವಣ ರಾಜ್ಯದಲ್ಲಿ ನವದಂಪತಿ’ಗಳಾದ ಯುವ ಪ್ರತಿಭೆ ಅರ್ಜುನ್ ಸೂರ್ಯ ಹಾಗೂ ನಿಧಿ ಹೆಗ್ಡೆ


*ನಿರ್ಮಾಪಕರಾದ ಬಡವ ರಾಸ್ಕಲ್ ಡೈರೆಕ್ಟರ್… ರಾವಣ ರಾಜ್ಯದಲ್ಲಿ ನವದಂಪತಿಗಳಿಗೆ ಸಾಥ್ ಕೊಟ್ಟ ಶಂಕರ್ ಗುರು*


‘ಬಡವರ ಮನೆ ಮಕ್ಕಳು ಬೆಳಿಬೇಕು ಕಣ್ರಯ್ಯ’ ಎಂಬ ನಾಣ್ಮುಡಿ ಸೃಷ್ಟಿಕರ್ತ ಈಗ ಒಂದು ಹೆಜ್ಜೆ ಮುಂದೆ ಹೋಗಿ ಚಿತ್ರ ನಿರ್ಮಾಣಕ್ಕೆ ಇಳಿದಿದ್ದಾರೆ. ಬಡವ ರಾಸ್ಕಲ್ ಸಿನಿಮಾ ಸೂತ್ರಧಾರ ಶಂಕರ್ ಗುರು ಈಗ ನಿರ್ಮಾಪಕರಾಗಿದ್ದಾರೆ. ಯುವ ಪ್ರತಿಭೆಗಳ‌ ರಾವಣ ರಾಜ್ಯದಲ್ಲಿ ನವದಂಪತಿಗಳು ಎಂಬ ಕನಸಿಗೆ ಶಂಕರ್ ಗುರು ಸಾಥ್ ಕೊಟ್ಟಿದ್ದಾರೆ. ಅಂದಹಾಗೇ ಈ ಚಿತ್ರದ ಪ್ರಮುಖ‌ ಪಿಲ್ಲರ್ ಧೀರಜ್ ಎಂವಿ ಹಾಗೂ ವರುಣ್ ಗುರುರಾಜ್. ಇವರಿಬ್ಬರು ಗ್ರೀನ್ ಚಿಲ್ಲೀಸ್ ಸ್ಟುಡಿಯೋಸ್ ಹಾಗೂ ಧೀರಜ್ ಎಂವಿ ಫಿಲ್ಮಂಸ್ ನಡಿ ರಾವಣ ರಾಜ್ಯದಲ್ಲಿ ನವದಂಪತಿಗಳು ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಧೀರಜ್ ಹಾಗೂ ವರುಣ್ ಗುರುರಾಜ್ ಸಾಹಸಕ್ಕೆ ಶಂಕರ್ ಗುರು ನಿರ್ಮಾಪರಾಗಿ ಬೆಂಬಲ ನೀಡಿದ್ದಾರೆ.


ರಾವಣ ರಾಜ್ಯದಲ್ಲಿ ನವದಂಪತಿಗಳು ಸಿನಿಮಾಗೆ ಯುವ ಪ್ರತಿಭೆ ರಂಗ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಗುರು ಪ್ರಸಾದ್ ಗರಡಿಯಲ್ಲಿ ಕೋ ಡೈರೆಕ್ಟರ್ ಆಗಿ ಹಾಗೂ ಸುನಿಲ್ ಕುಮಾರ್ ದೇಸಾಯಿ ಅವರ ಜೊತೆ ನಿರ್ದೇಶನದ ಪಟು ಕಲಿತುಕೊಂಡಿರುವ ರಂಗ ಈ ಚಿತ್ರದ ಮೂಲಕ ಸ್ವತಂತ್ರ ನಿರ್ದೇಶಕರಾಗಿ ಗುರುತಿಸಿಕೊಳ್ಳುತ್ತಿದ್ದಾರೆ. ಸದ್ದಿಲ್ಲದೇ ಶೂಟಿಂಗ್ ಮುಗಿಸಿ ಚಿತ್ರ ಬಿಡುಗಡೆಗೆ ಸಿದ್ಧವಾಗಿದೆ. ಅದರ ಭಾಗವಾಗಿ ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ಅನಾವರಣ ಮಾಡುವ ಮೂಲಕ ಪ್ರಚಾರ ಕಾರ್ಯಕ್ಕೆ ಚಾಲನೆ ಕೊಡಲಾಗಿದೆ. ಯುವ ಪ್ರತಿಭೆ ಅರುಣ್ ಸೂರ್ಯ ಹಾಗೂ ಡೊಳ್ಳು ಸೇರಿದಂತೆ ಹಲವು ಚಿತ್ರಗಳಲ್ಲಿ ನಟಿಸಿರುವ ನಿಧಿ ಹೆಗ್ಡೆ  ಜೋಡಿಯಾಗಿ ನಟಿಸಿದ್ದಾರೆ.



ಅಭಿನಂದನ್ ಕಶ್ಯಪ್ ಮ್ಯೂಸಿಕ್ ಹಾಗೂ ಸೌಂಡ್ ಡಿಸೈನ್, ವೀರೇಶ್ ಎನ್ ಟಿಎ ಕ್ಯಾಮೆರಾ ಹಿಡಿದಿದ್ದು, ವಸಂತ ಸಂಕಲನ ಚಿತ್ರಕ್ಕಿದೆ. ಡಾರ್ಕ್ ಸೋಷಿಯಲ್ ಸರ್ಟಿಕಲ್ ಡ್ರಾಮಾ ಕಂಟೆಂಟ್ ಹೊಂದಿದ್ದು,  ಹೊಸದಾಗಿ ಮದುವೆಯಾದ ನವದಂಪತಿಗಳು ಸಾಮಾಜಿಕ ಕಟ್ಟುಪಾಡುಗಳಿಗೆ ಸಿಲುಕುವ ಕಥೆಯೇ ಚಿತ್ರದ ತಿರುಳು. ರಾವಣ ರಾಜ್ಯದಲ್ಲಿ ನವದಂಪತಿಗಳು ಸಿನಿಮಾವನ್ನು ಕನ್ನಡ‌ ಫಿಲ್ಮಿ ಕ್ಲಬ್ ಸಿನಿಮಾ ಬಿಡುಗಡೆ ಕಾರ್ಯಕ್ಕೆ ಸಾಥ್ ಕೊಡಲಿದೆ.
Next article

Must Read

spot_img
Share via
Copy link
Powered by Social Snap