, ನಿರ್ದೇಶಿಸಿರುವ ಸ್ಟಾಕರ್ ಸಿನಿಮಾ ಬಿಡುಗಡೆಗೆ ಸಜ್ಜಾಗಿದ್ದು, ಮೂಲತಃ ತೆಲುಗಿನವರಾದ ರಾಮ್ ಸಿನಿಮಾದಲ್ಲಿ ನಾಯಕ ನಟನಾಗಿ ಅಭಿನಯಿಸಿದ್ದಾರೆ.
ತೆಲುಗಿನವರಾದ್ರೂ ಕನ್ನಡ ಮೇಲಿನ ಇವರ ಅಭಿಮಾನ ಕನ್ನಡ ಚಿತ್ರರಂಗದತ್ತ ಕರೆದುಕೊಂಡು ಬಂದಿದೆ. ಹೀಗಾಗಿ ತಾವು ಮೊದಲ ಸಿನಿಮಾವನ್ನು ಕನ್ನಡದಲ್ಲಿಯೇ ನಟಿಸ್ಬೇಕು ಅನ್ನೋ ಇಚ್ಛೆಯಿಂದ ರಾಮ್ ಸ್ಟಾಕರ್ ಸಿನಿಮಾದಲ್ಲಿ ಬಣ್ಣ ಹಚ್ಚಿದ್ದಾರೆ. ಅರವಿಂದ್ ಎಂಬ ಪವರ್ ಫುಲ್ ಪಾತ್ರ ಮಾಡಿರುವ ರಾಮ್ ಲುಕ್ ರಿವೀಲ್ ಆಗಿದೆ. ಗೈಯಲ್ಲಿ ಗನ್ ಹಿಡಿದು, ದ್ವೇಷ ತುಂಬಿರುವ ಕಣ್ಣುಗಳಿಂದ ಖಡಕ್ ಲುಕ್ ನಲ್ಲಿ ಮಿಂಚಿರುವ ರಾಮ್ ಗೆಟಪ್ ಸೂಪರ್ ಆಗಿದೆ.
ಬೆಳದಿಂಗಳ ಬಾಲೆ ಸುಮನ್ ನರ್ಗಕರ್, ಐಶ್ವರ್ಯ ನಂಬಿಯರ್, ಉದಯ್ ಆಚಾರ್, ನಮ್ರತಾ ಪಾಟೀಲ್, ಜಿತೆನ್ ಆರೋರಾ, ಭವಾನಿಶಂಕರ್ ದೇಸಾಯಿ ಮುಂತಾದವರು ಸ್ಟಾಕರ್ ಸಿನಿಮಾದಲ್ಲಿ ನಟಿಸಿದ್ದು, ಕನ್ನಡದ ಜೊತೆಗೆ ಹಿಂದಿ ಭಾಷೆಯಲ್ಲಿ ಈ ಸಿನಿಮಾ ತಯಾರಾಗಿದೆ.
ಥ್ರಿಲ್ಲರ್ ಜೊತೆಗೆ ಸಸ್ಪೆನ್ಸ್ ಕಥಾಹಂದರ ಹೊಂದಿರುವ ಸ್ಟಾಕರ್ ಸಿನಿಮಾವನ್ನು, ಎಸ್ ಎಂ ಎಲ್ ಪ್ರೊಡಕ್ಷನ್ಸ್, ಸ್ಕ್ರಿಪ್ಟ್ ಟೀಸ್ ಫಿಲ್ಮ್ಸ್ ನಡಿ ಎಂ ಎನ್ ವಿ ರಮಣ, ಸಂದೀಪ್ ಗೌಡ ಹಾಗೂ ಸ್ವಾತಿ ಗೋವಾಡ ನಿರ್ಮಾಣ ಮಾಡಿದ್ದಾರೆ.
ಸೋಮಶೇಖರ್, ಭರತ್ ಪ್ರಮೋದ್ ಹಾಗೂ ಕಿಶೋರ್ ಭಾರ್ಗವ್ ಚಿತ್ರಕಥೆ ಬರೆದಿದ್ದು, ವಿನೋದ್ ರಾಜ್ ಕ್ಯಾಮೆರಾ ಕೈ ಚಳಕ, ಸ್ಕಂದ ಕಶ್ಯಪ್ ಮ್ಯೂಸಿಕ್, ಸುಧೀರ್ ಪಿಆರ್ ಕಲಾ ನಿರ್ದೇಶನ, ವಂದನಾ ಭಂಡಾರೆ ವಸ್ತ್ರ ವಿನ್ಯಾಸ ಸಿನಿಮಾದಲ್ಲಿರಲಿದೆ. ಸದ್ಯ ಸ್ಟಾಕರ್ ಸಿನಿಮಾ ಶೂಟಿಂಗ್ ಕಂಪ್ಲೀಟ್ ಮಾಡಿ ಬಿಡುಗಡೆಗೆ ಎದುರು ನೋಡುತ್ತಿದೆ.