HomeNewsಅಶ್ವಿನಿ ಪುನೀತ್ ರಾಜಕುಮಾರ್ ಅವರಿಂದ ಬಿಡುಗಡೆಯಾಯಿತು ರಿಷಿ ಅಭಿನಯದ "ರುದ್ರ ಗರುಡ ಪುರಾಣ" ಚಿತ್ರದ ಫಸ್ಟ್...

ಅಶ್ವಿನಿ ಪುನೀತ್ ರಾಜಕುಮಾರ್ ಅವರಿಂದ ಬಿಡುಗಡೆಯಾಯಿತು ರಿಷಿ ಅಭಿನಯದ “ರುದ್ರ ಗರುಡ ಪುರಾಣ” ಚಿತ್ರದ ಫಸ್ಟ್ ಲುಕ್. .

“ಆಪರೇಶನ್ ಅಲಮೇಲ್ಲಮ್ಮ”, “ಕವಲುದಾರಿ” ಸೇರಿದಂತೆ ಅನೇಕ ಚಿತ್ರಗಳಲ್ಲಿ ನಟಿಸಿ ಹಾಗೂ ಜನಪ್ರಿಯ “ಸೈತಾನ್” ವೆಬ್ ಸಿರೀಸ್ ಮೂಲಕ ಮನೆಮಾತಾಗಿರುವ ನಟ ರಿಷಿ ಅಭಿನಯದ “ರುದ್ರ ಗರುಡ ಪುರಾಣ” ಚಿತ್ರದ ಫಸ್ಟ್ ಲುಕ್ ಬಿಡುಗಡೆಯಾಗಿದೆ. ಅಶ್ವಿನಿ ಪುನೀತ್ ರಾಜಕುಮಾರ್ ಅವರು ಈ ಚಿತ್ರದ ಫಸ್ಟ್ ಲುಕ್ ಬಿಡುಗಡೆ ಮಾಡಿ ಶುಭ ಕೋರಿದ್ದಾರೆ. ರಿಷಿ ಅವರು ಅಭಿನಯಿಸಿದ್ದ “ಕವಲುದಾರಿ” ಚಿತ್ರ ಪುನೀತ್ ರಾಜಕುಮಾರ್ ಅವರ ಪಿ.ಆರ್.ಕೆ ಪ್ರೊಡಕ್ಷನ್ಸ್ ನಿಂದ ನಿರ್ಮಾಣವಾಗಿತ್ತು.

ಬಿಡುಗಡೆಯಾದ ಕ್ಷಣದಿಂದಲೇ ಫಸ್ಟ್ ಲುಕ್ ಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದ್ದು, ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ. ರಿಷಿ ಈ ಚಿತ್ರದಲ್ಲಿ ಪೊಲೀಸ್ ಅಧಿಕಾರಿಯಾಗಿ(ತನಿಖಾಧಿಕಾರಿ) ಕಾಣಿಸಿಕೊಂಡಿದ್ದಾರೆ. ಈ ಚಿತ್ರದ ಫಸ್ಟ್ ಲುಕ್ ನೋಡಿದ ಕೂಡಲೇ ಚಿತ್ರವನ್ನು ನೋಡಲೇಬೇಕು ಎನ್ನುವ ಉತ್ಸಾಹವನ್ನು ನಿರ್ದೇಶಕರು ಹುಟ್ಟಿ ಹಾಕಿದ್ದಾರೆ. ರಿಷಿ, ಕನ್ನಡ ಹಾಗೂ ತೆಲುಗು ಎರಡು ಚಿತ್ರರಂಗದಲ್ಲೂ ಹೆಸರು ಮಾಡಿದ್ದಾರೆ‌‌. “ರುದ್ರ ಗರುಡ ಪುರಾಣ” ಚಿತ್ರದ ರಿಷಿ ಅವರ ಫಸ್ಟ್ ಲುಕ್ ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ‌ ಹಾಗೂ ಚಿತ್ರ ಬಿಡುಗಡೆಗೆ ಕಾತುರದಿಂದ ಕಾಯುತ್ತಿದ್ದಾರೆ.

ಅಶ್ವಿನಿ ಆರ್ಟ್ಸ್ ಲಾಂಛನದಲ್ಲಿ ಅಶ್ವಿನಿ ಲೋಹಿತ್ ಅವರು ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. “ಚಂಬಲ್”, ” ಡಿಯರ್ ವಿಕ್ರಮ್” ಸೇರಿದಂತೆ ಕೆಲವು ಚಿತ್ರಗಳನ್ನು ನಿರ್ದೇಶಿಸಿರುವ ಕೆ.ಎಸ್ ನಂದೀಶ್ ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಕಥೆ ಹಾಗೂ ಚಿತ್ರಕಥೆಯನ್ನು ನಿರ್ದೇಶಕರೆ ಬರೆದಿದ್ದಾರೆ. ಸಂಭಾಷಣೆ ರಘು ನಿಡುವಳ್ಳಿ ಅವರದು. ಕೆಪಿ ಸಂಗೀತ ನಿರ್ದೇಶನ, ಸಂದೀಪ್ ಕುಮಾರ್ ಛಾಯಾಗ್ರಹಣ ಹಾಗೂ ಮನು ಶೇಡ್ಗಾರ್ ಸಂಕಲನ ಈ ಚಿತ್ರಕ್ಕಿದೆ.

ರಿಷಿ ಅವರಿಗೆ ನಾಯಕಿಯಾಗಿ ಪ್ರಿಯಾಂಕ ಕುಮಾರ್ ನಟಿಸಿದ್ದಾರೆ. ವಿನೋದ್ ಆಳ್ವ, ಅವಿನಾಶ್, ಶಿವರಾಜ್ ಕೆ.ಆರ್ ಪೇಟೆ, ಗಿರಿ, ಕೆ.ಎಸ್ ಶ್ರೀಧರ್, ಅಶ್ವಿನಿ ಗೌಡ, ರಾಮ್ ಪವನ್, ವಂಶಿ, ಆಕರ್ಷ್, ಜೋಸೆಫ್, ಪ್ರಭಾಕರ್, ಗೌತಮ್ ಮೈಸೂರು, ಸ್ನೇಕ್ ಶ್ಯಾಮ್, ರಂಗನಾಥ್ ಭಾರದ್ವಾಜ್, ಕಾಮಿಡಿ ಕಿಲಾಡಿಗಳು ಜಗಪ್ಪ, ಪ್ರಸನ್ನ ಹಂಡ್ರಂಗಿ, ರದ್ವಿ ಮುಂತಾದವರು ತಾರಾಬಳಗದಲ್ಲಿದ್ದಾರೆ.

ಈಗಾಗಲೇ “ರುದ್ರ ಗರುಡ ಪುರಾಣ” ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದ್ದು, ಪೋಸ್ಟ್ ಪ್ರೊಡಕ್ಷನ್ ವರ್ಕ್ ಬಿರುಸಿನಿಂದ ಸಾಗಿದೆ‌. ಜುಲೈ ವೇಳೆಗೆ ಬಹು ನಿರೀಕ್ಷಿತ ಈ ಚಿತ್ರ ತೆರೆಗೆ ಬರಲಿದೆ.

Must Read

spot_img
Share via
Copy link
Powered by Social Snap