Kannada Beatz
News

ಡಾರ್ಲಿಂಗ್ ಕೃಷ್ಣ ಹುಟ್ಟುಹಬ್ಬಕ್ಕೆ ಶುಗರ್ ಫ್ಯಾಕ್ಟರಿ ವಿಡಿಯೋ ಟೀಸರ್

ಜೂನ್ 12 ನಟ ಡಾರ್ಲಿಂಗ್ ಕೃಷ್ಣ ಹುಟ್ಟುಹಬ್ಬ.
ಕೃಷ್ಣ ಅವರ ಹುಟ್ಟುಹಬ್ಬಕ್ಕೆ “ಶುಗರ್ ಫ್ಯಾಕ್ಟರಿ” ಚಿತ್ರದ ವಿಡಿಯೋ ಟೀಸರ್ ಬಿಡುಗಡೆಯಾಗಲಿದೆ.
ಟೀಸರ್ ನಲ್ಲಿ ಸಾಮಾನ್ಯವಾಗಿ ಪೋಸ್ಟರ್ ಗಳನ್ನು ಬಳಸಿಕೊಳ್ಳಲಾಗುತ್ತದೆ. ಆದರೆ ನಾವು ವಿಡಿಯೋ ತುಣುಕುಗಳನ್ನು ಬಳಸಿಕೊಂಡು ವಿಭಿನ್ನವಾಗಿ ಟೀಸರ್ ನಿರ್ಮಾಣ ಮಾಡಿದ್ದೇವೆ ಎನ್ನುತ್ತಾರೆ ಚಿತ್ರದ ನಿರ್ದೇಶಕ ದೀಪಕ್ ಅರಸ್.


ಜೂನ್ 12ರಂದು ಆನಂದ್ ಆಡಿಯೋ ಯೂಟ್ಯೂಬ್‌ ಚಾನಲ್ ನಲ್ಲಿ ಟೀಸರ್ ಬಿಡುಗಡೆಯಾಗಲಿದೆ.
ಜೂನ್ 11 ರಂದು ಸಂಜೆ 5 ಗಂಟೆಗೆ ಇನ್ ಸ್ಟಾಗ್ರಾಂ ಮೂಲಕ ಲೈವ್ ನಲ್ಲಿ ಚಿತ್ರತಂಡದ ಸದಸ್ಯರು ಟೀಸರ್ ಹಾಗೂ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ಮಾಹಿತಿ ನೀಡಲಿದ್ದಾರೆ.
ಈಗಾಗಲೇ ಬಹತೇಕ ಭಾಗದ ಚಿತ್ರೀಕರಣ ಮುಕ್ತಾಯವಾಗಿದೆ.
ಬೆಂಗಳೂರು ಹಾಗೂ ಗೋವಾದಲ್ಲಿ ಚಿತ್ರೀಕರಣ ನಡೆದಿದೆ.
ಲಾಕ್ ಡೌನ್ ಮುಗಿದ್ದು, ಚಿತ್ರೀಕರಣಕ್ಕೆ ಅನುಮತಿ ದೊರಕಿದ ಕೂಡಲೇ ಚಿತ್ರೀಕರಣ ಆರಂಭವಾಗಲಿದೆ.
ಡಾರ್ಲಿಂಗ್ ಕೃಷ್ಣ ಅವರಿಗೆ ನಾಯಕಿಯರಾಗಿ ಸೋನಾಲ್ ಮಾಂಟೆರೊ, ಅದ್ವಿತಿ ಶೆಟ್ಟಿ ಹಾಗೂ ಶಿಲ್ಪಾ ಶೆಟ್ಟಿ ಅಭಿನಯಿಸುತ್ತಿದ್ದಾರೆ. ರಂಗಾಯಣ ರಘು, ಲವ್ ಮಾಕ್ಟೇಲ್ ಅಭಿ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ.
ಬಾಲಮಣಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ಗಿರೀಶ್. ಆರ್ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ.‌
ಕಬೀರ್ ರಫಿ ಸಂಗೀತ ನಿರ್ದೇಶನ, ಸಂತೋಷ್ ರೈ ಪಾತಾಜೆ ಛಾಯಾಗ್ರಹಣ, ಕೆ.ಎಂ.ಪ್ರಕಾಶ್ ಸಂಕಲನ, ಅರ್ಜುನ್ ಸಾಹಸ ನಿರ್ದೇಶನ ಹಾಗೂ ‌ಧನಂಜಯ್ ಅವರ ನೃತ್ಯ ನಿರ್ದೇಶನವಿರುವ ‘ಶುಗರ್ ಫ್ಯಾಕ್ಟರಿ’ ಗೆ ಚೇತನ್ ಕುಮಾರ್ ಹಾಗೂ ಯೋಗಾನಂದ್ ಮುದ್ದಾನ್ ಸಂಭಾಷಣೆ ಬರೆಯುತ್ತಿದ್ದಾರೆ.

Related posts

ಕೋಟಿಜನರ ಮನಮುಟ್ಟಿದೆ “ಜ್ಯೂಲಿಯೆಟ್ 2” ಚಿತ್ರದ ಬಾಂಧವ್ಯದ ಹಾಡು.

Kannada Beatz

ಬಬ್ರೂ ಮೂಲಕ ಸುಮನ್ ನಗರ್ಕರ್ ಮತ್ತೆ ಚಂದನವನದಲ್ಲಿ ಶೈನ್

administrator

ಪ್ರೇಕ್ಷಕರು ತೋರುತ್ತಿದ್ದಾರೆ ಒಲವು. ಅದರಿಂದ ಸಾಧ್ಯವಾಯಿತು “ಗ್ರೇ ಗೇಮ್ಸ್” ಗೆಲುವು

Kannada Beatz

Leave a Comment

Share via
Copy link
Powered by Social Snap