Kannada Beatz
News

ಅದ್ದೂರಿಯಾಗಿ ಮೂಡಿಬಂದಿದೆ ” ಜಯಭೇರಿ ಕನ್ನಡ” ಸುಮಧುರ ಗೀತೆ .

ಡಾ||ಶೈಲೇಶ್ ಕುಮಾರ್ ನಿರ್ಮಾಣ, ಡಾ||ಶಶಿಕಲಾ ಪುಟ್ಟಸ್ವಾಮಿ ನಿರ್ದೇಶನದ ಈ ಹಾಡಿನಲ್ಲಿ ಯಶಸ್ ಸೂರ್ಯ, ನಿಶ್ವಿಕಾ ನಾಯ್ಡು, ಕಿರಣ್ ರಾಜ್ ನಟನೆ .

ನಾವೆಲ್ಲಾ ಈಗ ಕನ್ನಡ ರಾಜ್ಯೋತ್ಸವದ ಸಂಭ್ರಮದಲ್ಲಿದ್ದೀವಿ. ಈ ಸಂಭ್ರಮವನ್ನು ಮತ್ತಷ್ಟು ಹೆಚ್ಚಿಸುವ “ಜಯಭೇರಿ ಕನ್ನಡ” ಎಂಬ ಹಾಡು ನವೆಂಬರ್ 2 ರಂದು ಹಂಪಿಯಲ್ಲಿ ನಡೆದ ಕರ್ನಾಟಕ ಸಂಭ್ರಮ ಕಾರ್ಯಕ್ರಮದಲ್ಲಿ ಸನ್ಮಾನ್ಯ ಮುಖ್ಯಮಂತ್ರಿ ಶ್ರೀಸಿದ್ದರಾಮಯ್ಯ ಬಿಡುಗಡೆ ಮಾಡಿದ್ದಾರೆ. ಈ ಹಾಡಿನ ಬಗ್ಗೆ ಹೆಚ್ಚಿನ ಮಾಹಿತಿ ನೀಡಲು ನಿರ್ಮಾಪಕ ಡಾ||ಶೈಲೇಶ್ ಕುಮಾರ್ ಪತ್ರಿಕಾಗೋಷ್ಠಿ ಆಯೋಜಿಸಿದ್ದರು.

ನಾನು ವೃತ್ತಿಯಲ್ಲಿ ವೈದ್ಯ. ಸಿನಿಮಾ ರಂಗದಲ್ಲಿ ನನಗೆ ಡಾ||ರಾಜಕುಮಾರ್ ಅವರು ಪ್ರೇರಣೆ. ನಮ್ಮ ಶ್ರೀನಾಗಬ್ರಹ್ಮ ಕ್ರಿಯೇಷನ್ಸ್ ಲಾಂಛನದಲ್ಲಿ ಸಂಚಾರಿ ವಿಜಯ್ ಅಭಿನಯಿಸಿದ್ದ “6 ನೇ ಮೈಲಿ” ಚಿತ್ರ ನಿರ್ಮಾಣ ಮಾಡಿದ್ದೆ. ಈಗ “ತಲ್ವಾರ್ ಪೇಟೆ” ಚಿತ್ರವನ್ನು ತೆರೆಗೆ ತರುವ ತಯಾರಿ ನಡೆಯುತ್ತಿದೆ. ನನಗೆ ಈ ಸಮಾಜ ಸಾಕಷ್ಟು ಕೊಟ್ಟಿದೆ. ನಾನು ಸಮಾಜಕ್ಕೆ ಏನಾದರೂ ಮಾಡಬೇಕೆಂದು ಹಾಗೂ ಕನ್ನಡದ ಮೇಲಿನ ಭಾಷಾಭಿಮಾನದಿಂದ “ಜಯಭೇರಿ ಕನ್ನಡ” ಎಂಬ ಕನ್ನಡದ ಹಿರಿಮೆ ಸಾರುವ ಹಾಡೊಂದನ್ನು ನಿರ್ಮಾಣ ಮಾಡಿದ್ದೇನೆ. ಡಾ||ಶಶಿಕಲಾ ಪುಟ್ಟಸ್ವಾಮಿ ಈ ಹಾಡನ್ನು ಬರೆದು ನಿರ್ದೇಶನ ಮಾಡಿದ್ದಾರೆ. ಸಾಯಿಕಿರಣ್ ಸಂಗೀತ ನೀಡಿದ್ದಾರೆ. ಹೇಮಂತ್ ಕುಮಾರ್, ಅನಿರುದ್ದ್ ಶಾಸ್ತ್ರಿ , ಅನುರಾಧ ಭಟ್ ಹಾಡಿದ್ದಾರೆ. ಯಶಸ್ ಸೂರ್ಯ, ನಿಶ್ವಿಕಾ ನಾಯ್ಡು, ಕಿರಣ್ ರಾಜ್, ವೀಣಾ ಪೊನ್ನಪ್ಪ ಹಾಗೂ ನಾನು ಈ ಹಾಡಿನಲ್ಲಿ ಅಭಿನಯಿಸಿದ್ದೇವೆ. ಈ ಹಾಡನ್ನು ನಿರ್ಮಾಣ ಮಾಡಿ ಮಾನ್ಯ ಸಚಿವರಾದ ಶಿವರಾಜ್ ತಂಗಡಗಿ ಅವರ ಬಳಿ ಹೇಳಿದಾಗ, ಅವರು ಈ ಹಾಡನ್ನು ನವೆಂಬರ್ 2 ರಂದು ಹಂಪಿಯಲ್ಲಿ ನಡೆದ ಕರ್ನಾಟಕ ಸಂಭ್ರಮ ಕಾರ್ಯಕ್ರಮದಲ್ಲಿ ಸನ್ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರಿಂದ ಬಿಡುಗಡೆ ಮಾಡಿಸಿದ್ದಾರೆ. ಈ ಸಂದರ್ಭದಲ್ಲಿ ನಾನು ಕರ್ನಾಟಕ ಸರ್ಕಾರಕ್ಕೆ ಹಾಗೂ ತಂಡಕ್ಕೆ ಧನ್ಯವಾದ ತಿಳಿಸುತ್ತೇನೆ ಎಂದರು ಡಾ||ಶೈಲೇಶ್ ಕುಮಾರ್.

ಡಾ||ಶೈಲೇಶ್ ಕುಮಾರ್ ಅವರು ಕನ್ನಡ ರಾಜ್ಯೋತ್ಸವ ಸಂದರ್ಭದಲ್ಲಿ ಹಾಡೊಂದನ್ನು ನಿರ್ಮಾಣ ಮಾಡುತ್ತಿದ್ದೇನೆ. ನೀವೇ ಬರೆದು ನಿರ್ದೇಶನ ಮಾಡಬೇಕೆಂದರು. ತುಂಬಾ ಸಂತೋಷವಾಯಿತು. ಜೊತೆಗೆ ಕನ್ನಡದ ಕುರಿತು ಹಾಡನ್ನು ಬರೆಯುವಾಗ ಸ್ವಲ್ಪ ಭಾವುಕಳಾದೆ. ಇಡೀ ತಂಡದ ಸಹಕಾರದಿಂದ ಈ ಹಾಡು ಅದ್ದೂರಿಯಾಗಿ ಬಂದಿದೆ ಎಂದರು ನಿರ್ದೇಶಕಿ ಶಶಿಕಲಾ ಪುಟ್ಟಸ್ವಾಮಿ.

ನನಗೆ ಶೈಲೇಶ್ ಕುಮಾರ್ ಅವರು ಈ ರೀತಿ ಕನ್ನಡದ ಹಾಡೊಂದರಲ್ಲಿ ಅಭಿನಯಿಸಬೇಕೆಂದು ಕೇಳಿದರು. ಕನ್ನಡದ ಮೇಲಿನ ಅಭಿಮಾನದಿಂದ ಈ ಹಾಡಿನಲ್ಲಿ ಅಭಿನಯಿಸಿದ್ದೇನೆ. ಹಾಡು ಚೆನ್ನಾಗಿದೆ ಎಂದು ನಿಶ್ವಿಕಾ ನಾಯ್ಡು ತಿಳಿಸಿದರು.

ಕನ್ನಡ ನನ್ನ ಉಸಿರು. ಅಂತಹ ಕನ್ನಡದ ಸುಂದರ ಗೀತೆಯೊಂದರಲ್ಲಿ ಕರ್ನಾಟಕ ರಾಜ್ಯೋತ್ಸವದ ಈ ಸಂದರ್ಭದಲ್ಲಿ ಅಭಿನಯಿಸಿದ್ದು ತುಂಬಾ ಖುಷಿಯಾಗಿದೆ ಎನ್ನುತ್ತಾರೆ ನಟ ಯಶಸ್ ಸೂರ್ಯ.

ಸಂಗೀತ ನಿರ್ದೇಶಕ ಸಾಯಿಕಿರಣ್ ಸಹ ಹಾಡಿನ ಬಗ್ಗೆ ಮಾಹಿತಿ ನೀಡಿದರು. ಧನು ಮಾಸ್ಟರ್ ಈ ಹಾಡಿಗೆ ನೃತ್ಯ ಸಂಯೋಜನೆ ಮಾಡಿದ್ದಾರೆ.

Related posts

ಸತ್ಯಕ್ಕಾಗಿ ಹೋರಾಟಕ್ಕಿಳಿದ ನಿರಂಜನ್ ಸುಧೀಂದ್ರ… ಸ್ಪಾರ್ಕ್ ಟೀಸರ್ ರಿಲೀಸ್

Kannada Beatz

*’ರಾವಣ ರಾಜ್ಯದಲ್ಲಿ ನವದಂಪತಿ’ಗಳಾದ ಯುವ ಪ್ರತಿಭೆ ಅರ್ಜುನ್ ಸೂರ್ಯ ಹಾಗೂ ನಿಧಿ ಹೆಗ್ಡೆ


*ನಿರ್ಮಾಪಕರಾದ ಬಡವ ರಾಸ್ಕಲ್ ಡೈರೆಕ್ಟರ್… ರಾವಣ ರಾಜ್ಯದಲ್ಲಿ ನವದಂಪತಿಗಳಿಗೆ ಸಾಥ್ ಕೊಟ್ಟ ಶಂಕರ್ ಗುರು*


‘ಬಡವರ ಮನೆ ಮಕ್ಕಳು ಬೆಳಿಬೇಕು ಕಣ್ರಯ್ಯ’ ಎಂಬ ನಾಣ್ಮುಡಿ ಸೃಷ್ಟಿಕರ್ತ ಈಗ ಒಂದು ಹೆಜ್ಜೆ ಮುಂದೆ ಹೋಗಿ ಚಿತ್ರ ನಿರ್ಮಾಣಕ್ಕೆ ಇಳಿದಿದ್ದಾರೆ. ಬಡವ ರಾಸ್ಕಲ್ ಸಿನಿಮಾ ಸೂತ್ರಧಾರ ಶಂಕರ್ ಗುರು ಈಗ ನಿರ್ಮಾಪಕರಾಗಿದ್ದಾರೆ. ಯುವ ಪ್ರತಿಭೆಗಳ‌ ರಾವಣ ರಾಜ್ಯದಲ್ಲಿ ನವದಂಪತಿಗಳು ಎಂಬ ಕನಸಿಗೆ ಶಂಕರ್ ಗುರು ಸಾಥ್ ಕೊಟ್ಟಿದ್ದಾರೆ. ಅಂದಹಾಗೇ ಈ ಚಿತ್ರದ ಪ್ರಮುಖ‌ ಪಿಲ್ಲರ್ ಧೀರಜ್ ಎಂವಿ ಹಾಗೂ ವರುಣ್ ಗುರುರಾಜ್. ಇವರಿಬ್ಬರು ಗ್ರೀನ್ ಚಿಲ್ಲೀಸ್ ಸ್ಟುಡಿಯೋಸ್ ಹಾಗೂ ಧೀರಜ್ ಎಂವಿ ಫಿಲ್ಮಂಸ್ ನಡಿ ರಾವಣ ರಾಜ್ಯದಲ್ಲಿ ನವದಂಪತಿಗಳು ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಧೀರಜ್ ಹಾಗೂ ವರುಣ್ ಗುರುರಾಜ್ ಸಾಹಸಕ್ಕೆ ಶಂಕರ್ ಗುರು ನಿರ್ಮಾಪರಾಗಿ ಬೆಂಬಲ ನೀಡಿದ್ದಾರೆ.


ರಾವಣ ರಾಜ್ಯದಲ್ಲಿ ನವದಂಪತಿಗಳು ಸಿನಿಮಾಗೆ ಯುವ ಪ್ರತಿಭೆ ರಂಗ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಗುರು ಪ್ರಸಾದ್ ಗರಡಿಯಲ್ಲಿ ಕೋ ಡೈರೆಕ್ಟರ್ ಆಗಿ ಹಾಗೂ ಸುನಿಲ್ ಕುಮಾರ್ ದೇಸಾಯಿ ಅವರ ಜೊತೆ ನಿರ್ದೇಶನದ ಪಟು ಕಲಿತುಕೊಂಡಿರುವ ರಂಗ ಈ ಚಿತ್ರದ ಮೂಲಕ ಸ್ವತಂತ್ರ ನಿರ್ದೇಶಕರಾಗಿ ಗುರುತಿಸಿಕೊಳ್ಳುತ್ತಿದ್ದಾರೆ. ಸದ್ದಿಲ್ಲದೇ ಶೂಟಿಂಗ್ ಮುಗಿಸಿ ಚಿತ್ರ ಬಿಡುಗಡೆಗೆ ಸಿದ್ಧವಾಗಿದೆ. ಅದರ ಭಾಗವಾಗಿ ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ಅನಾವರಣ ಮಾಡುವ ಮೂಲಕ ಪ್ರಚಾರ ಕಾರ್ಯಕ್ಕೆ ಚಾಲನೆ ಕೊಡಲಾಗಿದೆ. ಯುವ ಪ್ರತಿಭೆ ಅರುಣ್ ಸೂರ್ಯ ಹಾಗೂ ಡೊಳ್ಳು ಸೇರಿದಂತೆ ಹಲವು ಚಿತ್ರಗಳಲ್ಲಿ ನಟಿಸಿರುವ ನಿಧಿ ಹೆಗ್ಡೆ  ಜೋಡಿಯಾಗಿ ನಟಿಸಿದ್ದಾರೆ.



ಅಭಿನಂದನ್ ಕಶ್ಯಪ್ ಮ್ಯೂಸಿಕ್ ಹಾಗೂ ಸೌಂಡ್ ಡಿಸೈನ್, ವೀರೇಶ್ ಎನ್ ಟಿಎ ಕ್ಯಾಮೆರಾ ಹಿಡಿದಿದ್ದು, ವಸಂತ ಸಂಕಲನ ಚಿತ್ರಕ್ಕಿದೆ. ಡಾರ್ಕ್ ಸೋಷಿಯಲ್ ಸರ್ಟಿಕಲ್ ಡ್ರಾಮಾ ಕಂಟೆಂಟ್ ಹೊಂದಿದ್ದು,  ಹೊಸದಾಗಿ ಮದುವೆಯಾದ ನವದಂಪತಿಗಳು ಸಾಮಾಜಿಕ ಕಟ್ಟುಪಾಡುಗಳಿಗೆ ಸಿಲುಕುವ ಕಥೆಯೇ ಚಿತ್ರದ ತಿರುಳು. ರಾವಣ ರಾಜ್ಯದಲ್ಲಿ ನವದಂಪತಿಗಳು ಸಿನಿಮಾವನ್ನು ಕನ್ನಡ‌ ಫಿಲ್ಮಿ ಕ್ಲಬ್ ಸಿನಿಮಾ ಬಿಡುಗಡೆ ಕಾರ್ಯಕ್ಕೆ ಸಾಥ್ ಕೊಡಲಿದೆ.

Kannada Beatz

ಡೆವಿಲ್ ಜೊತೆಗೆ ಕುಡುಕನ ಎಂಟ್ರಿ.. ಪಿಯೊಟ್ ರಿಲೀಸ್

Kannada Beatz

Leave a Comment

Share via
Copy link
Powered by Social Snap