Kannada Beatz
News

ಟಿವಿ9 ಪ್ರಾಪರ್ಟಿ ಎಕ್ಸ ಪೊ ಆರಂಭ; ಒಳ್ಳೊಳ್ಳೆಯ ರಿಯಲ್ ಎಸ್ಟೇಟ್ ಆಫರ್ಗಳು; ಜನರಿಂದ ಉತ್ತಮ ಸ್ಪಂದನೆ

TV9 Sweet Home Real Estate Expo 2024:

ಟಿವಿ9 ಕನ್ನಡ ಮತ್ತು ಸ್ವೀಟ್ ಹೋಂ ಜಂಟಿಯಾಗಿ ಆಯೋಜಿಸಿರುವ ರಿಯಲ್ ಎಸ್ಟೇಟ್ ಎಕ್ಸ್ಪೋ 2024 ಚಾಲನೆಗೊಂಡಿದೆ. ಸಚಿವ ಭೈರತಿ ಸುರೇಶ್ ಅವರು ಇಂದು ಶುಕ್ರವಾರ ಈ ಪ್ರಾಪರ್ಟಿ ಎಕ್ಸ್ಪೋ ಉದ್ಘಾಟನೆ ನೆರವೇರಿಸಿದ್ದಾರೆ.

ಮನೆ ಅಥವಾ ಸೈಟ್ ಖರೀದಿಸಬೇಕು ಎನ್ನುವ ಆಸೆ ಪ್ರತಿಯೊಬ್ಬರಲ್ಲೂ ಇದ್ದೇ ಇರುತ್ತದೆ. ಬೆಂಗಳೂರಿನಂಥ ನಗರಗಳಲ್ಲಿ ಚಿರಾಸ್ತಿ ಹೊಂದುವುದು ಜೀವಮಾನದ ಸಾಧನೆ ಎಂಬಂತಾಗಿದೆ. ಥರಹೇವಾರಿ ಬಿಸಿನೆಸ್ಗಳಿಗೆ ಪೋಷಕವಾಗಿರುವ ಬೆಂಗಳೂರು ನಗರದಲ್ಲಿ ಭೂಮಿ ಬೆಲೆ ರಾಕೆಟ್ನಂತೆ ಮೇಲೇರುತ್ತಲೇ ಇದೆ. ಎಲ್ಲಾ ವರ್ಗದ ಜನರ ಆಸೆ, ಅಗತ್ಯಗಳಿಗೆ ತಕ್ಕಂತೆ ಮನೆ, ನಿವೇಶನಗಳು ಲಭ್ಯ ಇವೆ. ಆದರೆ, ಅವುಗಳನ್ನು ಹುಡುಕಲು ಸಂಯಮ ಬೇಕು. ಅಷ್ಟು ವ್ಯವಧಾನ, ಸಮಯ ಇರುವವರ ಸಂಖ್ಯೆ ಕಡಿಮೆ. ಹೀಗಾಗಿ, ದುರಾಸೆಯ ಬ್ರೋಕರ್ಗಳ ಜಾಲಕ್ಕೆ ಬೀಳುವುವರೇ ಹೆಚ್ಚು. ಇಂಥವರಿಗೆ ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್ಪೋ ಉತ್ತಮ ಮಾರ್ಗೋಪಾಯ ನೀಡಿದೆ. ನಗರದ ಪ್ರಮುಖ ಲ್ಯಾಂಡ್ ಡೆವಲಪರ್ಗಳು ಈ ಎಕ್ಸ್ಪೋದಲ್ಲಿ ಒಂದೆಡೆ ಲಭ್ಯ ಇರುತ್ತಾರೆ. ಇವರ ವಿವಿಧ ರೆಸಿಡೆನ್ಷಿಯಲ್ ಮತ್ತು ಕಮರ್ಷಿಯಲ್ ಪ್ರಾಪರ್ಟಿಗಳ ಬಗ್ಗೆ ಒಂದೇ ವೇದಿಕೆಯಲ್ಲಿ ಮಾಹಿತಿ ಪಡೆಯಬಹುದು.

ರಿಯಲ್ ಎಸ್ಟೇಟ್ ಎಕ್ಸ್​ಪೋ ವಿಶೇಷತೆಗಳಿವು..

ಲಕ್ಷುರಿ ವಿಲ್ಲಾ, ಪ್ಲಾಟ್, ಅಪಾರ್ಟ್​ಮೆಂಟ್, ಫಾರ್ಮ್​ಲ್ಯಾಂಡ್​ಗಳನ್ನು ಒಂದೇ ಸ್ಥಳದಲ್ಲಿ ಮಾಹಿತಿ ಪಡೆದು ಅವಲೋಕಿಸಬಹುದು.
ಉದ್ಯಮದ ತಜ್ಞರು, ಪ್ರಾಪರ್ಟಿ ಕನ್ಸಲ್ಟೆಂಟ್, ಲೀಗಲ್ ಅಡ್ವೈಸರ್​ಗಳೆಲ್ಲರೂ ಸ್ಥಳದಲ್ಲಿ ನೆರವಿಗೆ ಲಭ್ಯವಿರುತ್ತಾರೆ.

ಎಕ್ಸ್ಪೋದಲ್ಲಿ ನೀವು ಪ್ರಾಪರ್ಟಿ ಖರೀದಿಗೆ ನೊಂದಾಯಿಸಿದರೆ ವಿಶೇಷ ರಿಯಾಯಿತಿ, ಆಕರ್ಷಕ ಪಾವತಿ ಅವಕಾಶ ಮತ್ತಿತರ ಎಕ್ಸ್ಕ್ಲೂಸಿವ್ ಆಫರ್ಗಳನ್ನು ಪಡೆಯಬಹುದು.
ಇತರ ಹೂಡಿಕೆದಾರರೊಂದಿಗೆ ಮಾತನಾಡಬಹುದು,

ವೃತ್ತಿಪರರೊಂದಿಗೆ ಸಮಾಲೋಚಿಸಬಹುದು. ಹೀಗೆ ನಾನಾ ಅವಕಾಶಗಳುಂಟು.
ಟಿವಿ9 ಕನ್ನಡ ಸ್ವೀಟ್ ಹೋಮ್ ಕಳೆದ 10ಕ್ಕೂ ಹೆಚ್ಚು ವರ್ಷಗಳಿಂದ ಪ್ರಾಪರ್ಟಿ ಎಕ್ಸ್​ಪೋ ಆಯೋಜಿಸುತ್ತಾ ಬರುತ್ತಿದೆ. ವರ್ಷದಿಂದ ವರ್ಷಕ್ಕೆ ಎಕ್ಸ್​ಪೋದ ವಿಶ್ವಾಸಾರ್ಹತೆ, ಉಪಯುಕ್ತತೆ, ವ್ಯಾಪ್ತಿ ಹೆಚ್ಚುತ್ತಾ ಬಂದಿದೆ. ನಿಮಗೆ ಪ್ರಾಪರ್ಟಿ ಖರೀದಿಸುವ ಇರಾದೆ ಇದ್ದಲ್ಲಿ ಈ ವರ್ಷದ ಎಕ್ಸ್​ಪೋ ಖಂಡಿತ ತಪ್ಪಿಸಿಕೊಳ್ಳಬೇಡಿ…

Related posts

ಕ್ಷಣಕ್ಷಣಕ್ಕೂ ಕುತೂಹಲ ಕೆರಳಿಸೋ “ಚೇಸ್”..!

Kannada Beatz

ನರೇಂದ್ರ ಮೋದಿ ವಾಟ್ ಇಂಡಿಯಾ ಥಿಂಕ್ಸ್ ಟುಡೇ tv9 ನೆಟ್ವರ್ಕ್ ಶೃಂಗಸಭೆಯಲ್ಲಿ ಭಾಗವಹಿಸಿದರು

Kannada Beatz

ARM ಟ್ರೈಲರ್ ಮೆಚ್ಚಿದ ಕೆಜಿಎಫ್ ಡೈರೆಕ್ಟರ್ ಪ್ರಶಾಂತ್ ನೀಲ್

Kannada Beatz

Leave a Comment

Share via
Copy link
Powered by Social Snap