Kannada Beatz
News

ವೀರಗಾಸೆ ಹಿನ್ನೆಲೆಯ ಚಿತ್ರ
ರುದ್ರಾಭಿಷೇಕಂ’ ಮೇನಲ್ಲಿ ತೆರೆಗೆ

ಕರ್ನಾಟಕ ಸಾಂಸ್ಕೃತಿಕ‌ ಪರಂಪರೆಗಳಲ್ಲಿ ಒಂದಾದ ವೀರಗಾಸೆ ಕಲೆ ಹಾಗೂ ವೀರಭದ್ರ ದೇವರ ಇತಿಹಾಸವನ್ನು ತೆರೆದಿಡುವ ಚಿತ್ರ ರುದ್ರಾಭಿಷೇಕಂ. ಈಗಾಗಲೇ ತನ್ನ ಶೂಟಿಂಗ್ ಹಾಗೂ ಪೋಸ್ಟ್ ಪ್ರೊಡಕ್ಷನ್ ಕೆಲಸಗಳನ್ನು ಮುಗಿಸಿಕೊಂಡು ಸೆನ್ಸಾರ್ ಹಂತದಲ್ಲಿರುವ ಈ ಚಿತ್ರವನ್ನು ಮೇ ತಿಂಗಳಲ್ಲಿ ಬಿಡುಗಡೆ ಮಾಡಲಿರುವುದಾಗಿ ನಿರ್ದೇಶಕ ವಸಂತ್‌ಕುಮಾರ್ ತಿಳಿಸಿದ್ದಾರೆ. ಸಧ್ಯದಲ್ಲೇ ಚಿತ್ರದ ಆಡಿಯೋ ಬಿಡುಗಡೆ ಮಾಡುವುದಾಗಿಯೂ ಅವರು ತಿಳಿಸಿದ್ದಾರೆ.

ವೀರಗಾಸೆ ಕುಟುಂಬವೊಂದರ ಹಿನ್ನೆಲೆಯಲ್ಲಿ ಆ ಕಲೆಯ ಮೂಲ, ಅದರ ಇತಿಹಾಸವನ್ನು ಈ ಚಿತ್ರದಲ್ಲಿ ಹೇಳಲಾಗಿದೆ.
ಚಿನ್ನಾರಿ ಮುತ್ತ ವಿಜಯ ರಾಘವೇಂದ್ರ ಅವರು ವೀರಗಾಸೆ ಕಲಾವಿದ ಅಲ್ಲದೆ, ಇದೇ ಮೊದಲ ಬಾರಿಗೆ ತಂದೆ, ಮಗನಾಗಿ, ದ್ವಿಪಾತ್ರದಲ್ಲಿ ವಿಜಯ ರಾಘವೇಂದ್ರ ಅವರು ಕಾಣಿಸಿಕೊಂಡಿದ್ದಾರೆ. ಬಿಗ್ ಬಾಸ್ ಬೆಡಗಿ ಪ್ರಿಯಾಂಕ ತಿಮ್ಮೇಶ್ ಚಿತ್ರದ ನಾಯಕಿಯಾಗಿ ನಟಿಸಿದ್ದಾರೆ.
‘ರುದ್ರಾಭಿಷೇಕಂ’ ಫ್ಯಾನ್ ಇಂಡಿಯಾ ಸಂಸ್ಥೆಯ ಮೊದಲ ಚಿತ್ರವಾಗಿದ್ದು, ನಿರ್ದೇಶಕ ವಸಂತಕುಮಾರ್ ಜತೆಗೆ ಮಂಜುನಾಥ ಕೆ.ಎನ್, ಎನ್.ಜಯರಾಮ್, ಕೆ.ವೆಂಕಟೇಶ್, ಚಿದಾನಂದ ಮೂರ್ತಿ, ಸುರೇಶ್ ಬಾಬು, ಅಶ್ವಥ್ ನಾರಾಯಣ, ಶಿವಕುಮಾರ್, ರವಿಕುಮಾರ್‌ ಸೇರಿದಂತೆ 9 ಜನ ನಿರ್ಮಾಪಕರು ಈ ಚಿತ್ರಕ್ಕೆ ಬಂಡವಾಳ ಹೂಡಿದ್ಸಾರೆ.


ದೈವದ ಹಿನ್ನೆಲೆ ಇರುವ ಜನಪದ ಕಲೆಯನ್ನು ನಾಡಿನ ಮನೆ ಮನೆಗೂ ತಲುಪಿಸಬೇಕು ಎನ್ನುವುದೇ ನಮ್ಮ ಉದ್ದೇಶ. ನಾಯಕ ವಿಜಯ ರಾಘವೇಂದ್ರ ಕೂಡ ನಮಗೆ ತುಂಬಾ ಸಹಕಾರ ಕೊಟ್ಟಿದ್ದಾರೆ. ಚಿತ್ರದಲ್ಲಿ ನಾನೂ ಒಬ್ಬ ತತ್ವಜ್ಞಾನಿಯಾಗಿ ನಟಿಸಿದ್ದೇನೆ. ತಂದೆ, ಮಗ ಎರಡೂ ಪಾತ್ರಗಳ ಜತೆ ಇಡೀ ಚಿತ್ರದಲ್ಲಿ ಬರುವ ನನ್ನ ಪಾತ್ರಕ್ಕೆ ಎರಡು ಗೆಟಪ್ ಇದೆ ಎಂದೂ ವಸಂತಕುಮಾರ್ ಹೇಳಿದರು.
ಈ ಚಿತ್ರಕ್ಕೆ ದೇವನಹಳ್ಳಿ ಸುತ್ತಮುತ್ತ ಹಾಗೂ ಕರಾವಳಿಯ ಗೋಕರ್ಣ, ಹೊನ್ನಾವರ, ಕುಮಟಾ, ಅಬ್ಬಕ್ಕ ಫೋರ್ಟ್ ಅಲ್ಲದೆ ಅಘನಾಶಿನಿ ಹಿನ್ನೀರಿನ, ಈವರೆಗೆ ಯಾರೂ ಶೂಟ್ ಮಾಡದಂಥ ಲೊಕೇಶನ್ ನಲ್ಲಿ ಸುಮಾರು 50ಕ್ಕೂ ಹೆಚ್ಚು ದಿನಗಳ ಕಾಲ ಈ ಚಿತ್ರದ ಮಾತಿನ ಭಾಗ ಹಾಗೂ ಹಾಡುಗಳ ಚಿತ್ರೀಕರಣ ನಡೆಸಲಾಗಿದೆ.
ನಮ್ಮ ನಾಡಿನ ಜನಪದ ಹಿನ್ನೆಲೆ ಇಟ್ಟುಕೊಂಡು, ನೂರಾರು ವರ್ಷಗಳ ಇತಿಹಾಸ ಇರುವ ವೀರಗಾಸೆ ಕಲೆಯ ಮಹತ್ವ, ಇತಿಹಾಸವನ್ನು ಈ ಚಿತ್ರದಲ್ಲಿ ಹೇಳಲಾಗಿದೆ. ಈ ಕಥೆಯ ಮೂಲ ಹಂದರ ವೀರಭದ್ರ ದೇವರು. ಆತ ಹೇಗೆ ಬಂದ, ಆತ ಬರಲು ಕಾರಣವೇನು ಎಂಬುದನ್ನು ರುದ್ರಾಭಿಷೇಕಂ ಚಿತ್ರ ಹೇಳುತ್ತದೆ. ಬಲ ರಾಜವಾಡಿ, ವಿ.ಮನೋಹರ್, ಮನು, ಸನತ್, ಬುಲೆಟ್ ವಿನು, ಮಮತಾ ತುರುವೇಕೆರೆ, ನವನಿತಾ ಶೆಟ್ಟಿ, ಮಂಜುಳಾ ಹಾಗೂ ಇತರರು ಪ್ರಮುಖ ಪಾತ್ರಗಳಲ್ಲಿದ್ದಾರೆ.
ವಿ.ಮನೋಹರ್ ಅವರ ಸಂಗೀತ ಸಂಯೋಜನೆ, ಮುತ್ತುರಾಜ್ ಅವರ ಛಾಯಾಗ್ರಹಣ ಈ ಚಿತ್ರಕ್ಕಿದೆ.

Related posts

ಸುಸಜ್ಜಿತ ಎಂ.ಜೆ ಅವ್ಯಾನಾ ರೆಸಾರ್ಟ್ ನಲ್ಲಿ ಆರಂಭವಾಯಿತು ಅನಿಲ್ ಕುಮಾರ್ ಸಾರಥ್ಯದ ಎಂ ಜೆ ಪ್ರೊಡಕ್ಷನ್ .

Kannada Beatz

ಅಭಿರಾಮಚಂದ್ರ’ ತಂಡದ ಮತ್ತೊಂದು ಪ್ರಯತ್ನ…’ದಿಂಸೋಲ್’ ಫಸ್ಟ್ ಲುಕ್ ಬಿಡುಗಡೆ

Kannada Beatz

ಹೊಸಬರ “ಹುಲಿಭೇಟೆ” ಗೆ ಸಾಥ್ ನೀಡಿದ ಗಣ್ಯರು.

Kannada Beatz

Leave a Comment

Share via
Copy link
Powered by Social Snap