HomeNewsಪ್ರಭುದೇವ ಅಭಿನಯದ "wolf" ಚಿತ್ರದ ಫಸ್ಟ್ ಲುಕ್ ಬಿಡುಗಡೆ ಮಾಡಿದ ಶಿವರಾಜಕುಮಾರ್

ಪ್ರಭುದೇವ ಅಭಿನಯದ “wolf” ಚಿತ್ರದ ಫಸ್ಟ್ ಲುಕ್ ಬಿಡುಗಡೆ ಮಾಡಿದ ಶಿವರಾಜಕುಮಾರ್

ಕನ್ನಡ ಚಿತ್ರರಂಗಕ್ಕೆ ಸದಭಿರುಚಿ ಚಿತ್ರಗಳನ್ನು ನೀಡಿರುವ ಸಂದೇಶ್ ಪ್ರೊಡಕ್ಷನ್ಸ್ ಸಂಸ್ಥೆ ಲಾಂಛನದಲ್ಲಿ ರಾಷ್ಟ್ರಪ್ರಶಸ್ತಿ ವಿಜೇತ ನಿರ್ಮಾಪಕ ಸಂದೇಶ್ ನಾಗರಾಜ್(ಎಂ.ಎಲ್.ಸಿ) ನಿರ್ಮಿಸಿರುವ, ಇಂಡಿಯನ್ ಮೈಕಲ್ ಜಾಕ್ಸನ್ ಪ್ರಭುದೇವ ನಾಯಕರಾಗಿ ನಟಿಸಿರುವ “wolf” ಚಿತ್ರದ ಫಸ್ಟ್ ಲುಕ್ ಬಿಡುಗಡೆಯಾಗಿದೆ. ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಫಸ್ಟ್ ಲುಕ್ ಅನಾವರಣ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದ್ದಾರೆ.

ಬಹುಕೋಟಿ ವೆಚ್ಚದಲ್ಲಿ ಅದ್ದೂರಿಯಾಗಿ ನಿರ್ಮಾಣವಾಗಿರುವ ಈ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ.

ವಿನು ವೆಂಕಟೇಶ್ ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಕನ್ನಡ, ತಮಿಳು, ತೆಲುಗು ಹಾಗೂ ಮಲೆಯಾಳಂ ಭಾಷೆಗಳಲ್ಲಿ ಈ ಚಿತ್ರ ನಿರ್ಮಾಣವಾಗಿದೆ.

ಪ್ರಭುದೇವ, ಅಂಜು ಕುರಿಯನ್, ಲಕ್ಷ್ಮೀ ರೈ, ಅನಸೂಯ(ಪುಷ್ಪ ಖ್ಯಾತಿ) ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

ಅಂಬರೀಶ್ ಅವರ ಸಂಗೀತ ನಿರ್ದೇಶನವಿರುವ ಈ ಚಿತ್ರಕ್ಕೆ ಅರುಳ್ ವಿನ್ಸೆಂಟ್ ಅವರ ಛಾಯಾಗ್ರಹಣವಿದೆ. ಲಾರೆನ್ಸ್ ಕಿಶೋರ್ ಸಂಕಲನ, ಪ್ರದೀಪ್ ದಿನೇಶ್ ಸಾಹಸ ನಿರ್ದೇಶನ, ಮಣಿ ಮೌಳಿ ಕಲಾ ನಿರ್ದೇಶನ ಹಾಗೂ ಗಣೇಶ್, ಶ್ರೀಧರ್, ಭೂಪತಿ ರಾಜ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ. ಪ್ತಸಾದ್ ನಿರ್ಮಾಣ ಮೇಲ್ವಿಚಾರಣೆ ಹಾಗೂ ಶಂಕರ್ ಲಿಂಗಂ, ಮೈಸೂರು ಸುರೇಶ್ ನಿರ್ಮಾಣ ನಿರ್ವಹಣೆ “wolf” ಚಿತ್ರದ ನಿರ್ಮಾಣ ನಿರ್ವಾಹಕರು.

Must Read

spot_img
Share via
Copy link
Powered by Social Snap