Kannada Beatz
News

ಖ್ಯಾತ ನಿರ್ದೇಶಕ ಆರ್ ಚಂದ್ರು ಬಿಡುಗಡೆ ಮಾಡಿದರು “ಕಿರಿಕ್ ಶಂಕರ್” ಚಿತ್ರದ ಟ್ರೇಲರ್.

ಸಿನಿಮಾ ಇದೇ 27ಕ್ಕೆ ರಾಜ್ಯಾದ್ಯಂತ ಬಿಡುಗಡೆ.

ಲೂಸ್ ಮಾದ ಯೋಗಿ ನಾಯಕರಾಗಿ ನಟಿಸಿರುವ “ಕಿರಿಕ್ ಶಂಕರ್” ಚಿತ್ರದ ಟ್ರೇಲರನ್ನು ಖ್ಯಾತ ನಿರ್ದೇಶಕ ಆರ್ ಚಂದ್ರು ಬಿಡುಗಡೆ ಮಾಡಿ ಶುಭ ಕೋರಿದರು.

ನಾನು “ತಾಜ್ ಮಹಲ್” ಚಿತ್ರ ಮಾಡಿದಾಗಿನಿಂದಲೂ ಎಂ ಎನ್ ಕುಮಾರ್ ಅವರು ನೀಡುತ್ತಿರುವ ಪ್ರೋತ್ಸಾಹ ಅಪಾರ. ಅವರು ಈಗ ಸಿನಿಮಾ ಮಾಡು ಅಂದರು, ನಾನು ಮಾಡಲು ಸಿದ್ದ. ಅವರ ನಿರ್ಮಾಣದಲ್ಲಿ ಮೂಡಿಬಂದಿರುವ ಈ ಚಿತ್ರಕ್ಕೆ ಹಾಗೂ ಇಡೀ ತಂಡಕ್ಕೆ ನನ್ನ ಶುಭಾಶಯ. ಚಿತ್ರ ಯಶಸ್ವಿಯಾಗಲಿ ಅಂದರು ಆರ್ ಚಂದ್ರು.

ಮತ್ತೊಬ್ಬ ಅತಿಥಿ ALL OK ಕೂಡ ಚಿತ್ರತಂಡಕ್ಕೆ ಶುಭ ಕೋರಿದರು.

ಇಡೀ ತಂಡದ ಪರಿಶ್ರಮದಿಂದ ಈ ಚಿತ್ರ ಚೆನ್ನಾಗಿ ಮೂಡಿಬಂದಿದೆ. ಒಳ್ಳೆಯ ಮನಸ್ಸುಗಳು ಸೇರಿ ಮಾಡುವ ಕೆಲಸ ಒಳ್ಳೆಯದೆ ಆಗುತ್ತದೆ ಎಂಬ ಭರವಸೆ ಇದೆ. ನಮ್ಮ ಚಿತ್ರ ನೋಡಿ ಹಾರೈಸಿ ಎಂದರು ನಿರ್ದೇಶಕ ಅನಂತರಾಜ್.

ನಾನು‌ ಏಪ್ರಿಲ್ ನಲ್ಲಿ ಬಿಡುಗಡೆ ಮಾಡುವುದಾಗಿ ಹೇಳಿದ್ದೆ.‌ ತುಂಬಾ ಚಿತ್ರಗಳು ಬಿಡುಗಡೆಯಾಗಿದ್ದರಿಂದ ಈ 27ರಂದು 150 ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ “ಕಿರಿಕ್ ಶಂಕರ್” ಚಿತ್ರವನ್ನು ಬಿಡುಗಡೆ ಮಾಡುತ್ತಿದ್ದೇವೆ ಎಂದರು ನಿರ್ಮಾಪಕ ಎಂ.ಎನ್.ಕುಮಾರ್.

ನಾನು ಅಣ್ಣವ್ರ ಬ್ಯಾನರ್ ಬಿಟ್ಟರೆ ಇದೇ ದೊಡ್ಡ ಬ್ಯಾನರ್ ನಲ್ಲಿ ನಟನೆ ಮಾಡಿರುವುದು. ನಿರ್ದೇಶಕರು ಸಹ ಸಾಕಷ್ಟು ಹಿಟ್ ಚಿತ್ರಗಳನ್ನು ನೀಡಿರುವವರು. ಅವರ ಜೊತೆ ಕೆಲಸ ಮಾಡಿದ್ದು ಸಂತೋಷ ತಂದಿದೆ. ಎಲ್ಲರ ಪರಿಶ್ರಮದಿಂದ ಚಿತ್ರ ಚೆನ್ನಾಗಿ ಬಂದಿದೆ ಎಂದರು ನಾಯಕ ಲೂಸ್ ಮಾದ ಯೋಗಿ.

ನಾಯಕಿ ಅದ್ವಿಕ ಸಹ ಅಭಿನಯದ ಅನುಭವ ಹಂಚಿಕೊಂಡರು. ನಟ ರಿತೇಶ್, ನಟ ಹಾಗೂ ಸಂಕನಕಾರ ನಾಗೇಂದ್ರ ಅರಸ್ , ಸಂಗೀತ ನಿರ್ದೇಶಕ ವೀರ ಸಮರ್ಥ್, ಛಾಯಾಗ್ರಾಹಕ ಜೆ.ಜಿ ಕೃಷ್ಣ ಹಾಗೂ
ಕಾರ್ಯಕಾರಿ ನಿರ್ಮಾಪಕ ಯೋಗೀಶ್ ಹುಣಸೂರು “ಕಿರಿಕ್ ಶಂಕರ್” ಚಿತ್ರದ ಬಗ್ಗೆ ಮಾತನಾಡಿದರು.

Related posts

“ನಾಡಗೀತೆಗೆ ಮನಸೋತ ರಾಜಸ್ಥಾನದ ಕನ್ನಡ ಪ್ರೇಮಿ
ಮಹೇಂದ್ರ ಮುನ್ನೋತ್”

Kannada Beatz

ರಾಜೀವ IAS ಜನವರಿ 3ಕ್ಕೆ ತೆರೆಗೆ

administrator

ಡಿ.9ಕ್ಕೆ ರಾಜ್ಯದ 30 ಥಿಯೇಟರ್ ಗಳಲ್ಲಿ ‘RRR’ ಟ್ರೇಲರ್ ರಿಲೀಸ್.. ಯೂಟ್ಯೂಬ್ ಗೂ ಮೊದಲು ಚಿತ್ರಮಂದಿರಗಳಲ್ಲಿ RRR ಹವಾ.. ನೀವು ಭಾಗಿಯಾಗಿ ಟ್ರೇಲರ್ ಕಣ್ತುಂಬಿಕೊಳ್ಳಿ!

administrator

Leave a Comment

Share via
Copy link
Powered by Social Snap