Kannada Beatz
News

ಎ.ಹರ್ಷ ನಿರ್ದೇಶನದಲ್ಲಿ ‘ಭೀಮ’ನಾದ ಗೋಪಿಚಂದ್….ಹೇಗಿದೆ ಫಸ್ಟ್ ಲುಕ್?

ತೆಲುಗಿನ ಮ್ಯಾಚೋ ಸ್ಟಾರ್ ಖ್ಯಾತಿಯ ಗೋಪಿಚಂದ್ ಹಾಗೂ ಕನ್ನಡ ಎ.ಹರ್ಷ ಕಾಂಬೋದ ಸಿನಿಮಾಗೆ ಟೈಟಲ್ ಫಿಕ್ಸ್ ಆಗಿದೆ. ಗೋಪಿಚಂದ್ ಜನ್ಮದಿನದ ಪ್ರಯುಕ್ತ ಫಸ್ಟ್ ಹಾಗೂ ಟೈಟಲ್ ನ್ನು ಚಿತ್ರತಂಡ ರಿವೀಲ್ ಮಾಡಿದೆ. ಭೀಮನಾಗಿ ಮ್ಯಾಚೋ ಸ್ಟಾರ್ ಎಂಟ್ರಿ ಕೊಟ್ಟಿದ್ದು, ಪೊಲೀಸ್ ಖದರ್‌ನಲ್ಲಿ ಪ್ರತ್ಯಕ್ಷರಾಗಿದ್ದಾರೆ. ಮುಖದ ಮೇಲೆ ಗಾಯದ ಗುರುತು, ಉಗ್ರ ರೂಪಿಯಾಗಿ ತೀಕ್ಷ ನೋಟದ ಗೋಪಿಚಂದ್ ಹೊಸ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ.

ಭಜರಂಗಿ, ವಜ್ರಕಾಯ, ವೇದ ಸೇರಿದಂತೆ ಹಲವು ಸೂಪರ್ ಹಿಟ್ ಚಿತ್ರ ನಿರ್ದೇಶಿಸಿರುವ ಎ.ಹರ್ಷಗೆ ಇದು ಮೊದಲ ಸಿನಿಮಾ. ಭೀಮ ಕೌಟುಂಬಿಕ ಹಾಗೂ ಆಕ್ಷನ್ ಎಂಟರ್ ಟೈನರ್ ಕಥಾಹಂದರ ಹೊಂದಿದೆ.‌ ಕೆ.ಕೆ.ರಾಧಾ ಮೋಹನ್ ಶ್ರೀ ಸತ್ಯ ಸಾಯಿ ಆರ್ಟ್ಸ್ ಪ್ರೊಡಕ್ಷನ್ ನಡಿ ಬಹಳ ಅದ್ಧೂರಿಯಾಗಿ ನಿರ್ಮಾಣ ಮಾಡಿದ್ದಾರೆ. ಅಂದಹಾಗೇ ಭೀಮ ಶ್ರೀ ಸತ್ಯ ಸಾಯಿ ಆರ್ಟ್ಸ್ ಬ್ಯಾನರ್ ನಡಿ ನಿರ್ಮಾಣವಾಗುತ್ತಿರುವ 14ನೇ ಸಿನಿಮಾ. ಸ್ವಾಮಿ.ಜೆ ಛಾಯಾಗ್ರಹಣ, ಕೆಜಿಎಫ್ ಖ್ಯಾತಿಯ ರವಿ ಬಸ್ರೂರ್ ಸಂಗೀತ, ಅಜ್ಜು ಮಹಂಕಾಳಿ ಸಂಭಾಷಣೆ, ವೆಂಕಟ್ ಹಾಗೂ ಡಾ.ರವಿವರ್ಮಾ ಸ್ಟಂಟ್ ಚಿತ್ರಕ್ಕಿದೆ. ಹೈದ್ರಾಬಾದ್ ನ ಅಲ್ಯೂಮಿನಿಯಂ ಫ್ಯಾಕ್ಟರ್ ಯಲ್ಲಿ ಹೈವೋಲ್ಟೇಜ್ ಆಕ್ಷನ್ ದೃಶ್ಯಗಳ ಚಿತ್ರೀಕರಣ ಭರದಿಂದ ಸಾಗುತ್ತಿದೆ. ನಾಯಕಿ ಹಾಗೂ ಉಳಿದ ತಾರಾಬಳಗ ಅಪ್ ಡೇಟ್ ಶೀಘ್ರದಲ್ಲೇ ರಿವೀಲ್ ಮಾಡಿದೆ ಭೀಮ ಚಿತ್ರತಂಡ.

Related posts

‘ರಕ್ತದೋಕುಳಿ’ ಟೀಸರ್ ಲಾಂಚ್ ಮಾಡಿದ ಧೀರೇನ್ ರಾಮ್ ಕುಮಾರ್

Kannada Beatz

ರಾಗಿಣಿ ಬಿಡುಗಡೆ ಮಾಡಿದರು “ರಂಗಿನ ರಾಟೆ”ಯ ಟ್ರೇಲರ್

Kannada Beatz

ಸದ್ದಿಲ್ಲದೆ ಶುರುವಾಯಿತು “ಶರ”.

Kannada Beatz

Leave a Comment

Share via
Copy link
Powered by Social Snap