Kannada Beatz
News

ಪ್ರಜ್ವಲ್ ದೇವರಾಜ್ ಹುಟ್ಟುಹಬ್ಬಕ್ಕೆ ಬಿಡುಗಡೆಯಾಯಿತು “ಮಾಫಿಯಾ” ಚಿತ್ರದ ಮಾಸ್ ಪೋಸ್ಟರ್.

ಜುಲೈ 4 ಡೈನಾಮಿಕ್ ಪ್ರಿನ್ಸ್
ಪ್ರಜ್ವಲ್ ದೇವರಾಜ್ ಹುಟ್ಟುಹಬ್ಬ. ಇದರ ಸವಿನೆನಪಿಗಾಗಿ ಅವರು ನಾಯಕರಾಗಿ ನಟಿಸುತ್ತಿರುವ “ಮಾಫಿಯಾ” ಚಿತ್ರತಂಡ ಹೊಸ ಮಾಸ್ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ನಾಯಕ ಪ್ರಜ್ವಲ್ ಅವರಿಗೆ ಹುಟ್ಟುಹಬ್ಬದ ಶುಭಾಶಯ ಹೇಳಿದೆ.

ಕ್ರೈಂ ಥ್ರಿಲ್ಲರ್ ಕಥಾಹಂದರ ಈ ಚಿತ್ರದ ಚಿತ್ರೀಕರಣ ಬಹುತೇಕ ಮುಕ್ತಾಯವಾಗಿದೆ. ಜುಲೈ ಅಂತ್ಯದ ವೇಳೆಗೆ ಚಿತ್ರೀಕರಣ ಮುಕ್ತಾಯವಾಗಲಿದೆ. ಕನ್ನಡ, ತಮಿಳು ಹಾಗೂ ತೆಲುಗು ಭಾಷೆಗಳಲ್ಲಿ ಚಿತ್ರ ನಿರ್ಮಾಣವಾಗುತ್ತಿದೆ.

ಬೆಂಗಳೂರು ಕುಮಾರ್ ಫಿಲಂಸ್ ಲಾಂಛನದಲ್ಲಿ ಕುಮಾರ್ ಬಿ ನಿರ್ಮಿಸುತ್ತಿರುವ ಈ ಚಿತ್ರವನ್ನು ಲೋಹಿತ್ ಹೆಚ್ ನಿರ್ದೇಶಿಸುತ್ತಿದ್ದಾರೆ. ಎಸ್ ಪಾಂಡಿಕುಮಾರ್ ಛಾಯಾಗ್ರಹಣ ಹಾಗೂ ಅನೂಪ್ ಸೀಳಿನ್ ಅವರ ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ.

ಪ್ರಜ್ವಲ್ ದೇವರಾಜ್ ಅವರಿಗೆ ನಾಯಕಿಯಾಗಿ ಅದಿತಿ ಪ್ರಭುದೇವ ಅಭಿನಯಿಸುತ್ತಿದ್ದಾರೆ. ಶೈನ್ ಶೆಟ್ಟಿ, ದೇವರಾಜ್, ವಿಜಯ್ ಚೆಂಡೂರ್, ವಾಸುಕಿ ವೈಭವ್, ಸಾಧುಕೋಕಿಲ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

Related posts

ಮೋಷನ್ ಪೋಸ್ಟರ್ ನಲ್ಲೇ ಮೋಡಿ ಮಾಡಿದ “ಫಾದರ್” .

Kannada Beatz

ಮತ್ತೆ ನಿರ್ಮಾಣ ಸಾಹಸಕ್ಕಿಳಿದ ಅಜಯ್ ರಾವ್ – ‘ಕಟಿಂಗ್ ಶಾಪ್’ ನಿರ್ದೇಶಕನ ಚಿತ್ರಕ್ಕೆ ಗ್ರೀನ್ ಸಿಗ್ನಲ್

Kannada Beatz

ಏಪ್ರಿಲ್‌ ಒಂದರಂದು ವಿಭಿನ್ನ ಕಥೆಯ “ತ್ರಿಕೋನ” ಬಿಡುಗಡೆ.

Kannada Beatz

Leave a Comment

Share via
Copy link
Powered by Social Snap