Kannada Beatz
News

ಚಿರಂಜೀವಿ ಸರ್ಜಾ ಅಭಿನಯದ ರಾಜಮಾರ್ತಾಂಡ ಚಿತ್ರ ಸದ್ಯದಲ್ಲೇ ತೆರೆಗೆ.

ಸೆನ್ಸಾರ್ ಮುಂದೆ “ರಾಜಮಾರ್ತಾಂಡ”.

ಚಿಕ್ಕವಯಸ್ಸಿನಲ್ಲೇ ಕಾಲನ ಕರೆಗೆ ಓಗೊಟ್ಟು ನಮ್ಮನೆಲ್ಲಾ ಅಗಲಿದ ಚಿರಂಜೀವಿ ಸರ್ಜಾ ಅಭಿನಯದ ” ರಾಜಮಾರ್ತಾಂಡ” ಚಿತ್ರ ತೆರೆಗೆ ಬರಲು ಸಿದ್ದವಾಗಿದೆ. ಸದ್ಯದಲ್ಲೇ ಸೆನ್ಸಾರ್ ಮಂಡಳಿ ಚಿತ್ರವನ್ನು ವೀಕ್ಷಿಸಲಿದೆ.

ಚಿರಂಜೀವಿ ಸರ್ಜಾ ಅವರ ಸಾವಿನ ಮುಂಚೆಯೇ ಚಿತ್ರೀಕರಣ ಪೂರ್ತಿಯಾಗಿತ್ತು. ಹಾಗಾಗಿ ಅವರು ಚಿತ್ರೀಕರಣ ಮುಗಿಸಿದ್ದ ಕೊನೆಯ ಚಿತ್ರ ಅನ್ನಬಹುದು.‌ ಡಬ್ಬಿಂಗ್ ಮಾಡುವುದು ಮಾತ್ರ ಬಾಕಿಯಿತ್ತು. ಚಿರು ಅವರ ಪಾತ್ರಕ್ಕೆ ಧ್ರುವ ಸರ್ಜಾ ಡಬ್ಬಿಂಗ್ ಮಾಡಲಿದ್ದಾರೆ.”ರಾಜಮಾರ್ತಾಂಡ” ಚಿತ್ರದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಧ್ವನಿ ಸಹ ಕೇಳಬಹುದು.

ಗೀತರಚನೆಕಾರರಾಗಿ ಜನಪ್ರಿಯರಾಗಿರುವ ಜೆ.ಕೆ.ರಾಮನಾರಾಯಣ್ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದು ನಿರ್ದೇಶಿಸಿರುವ ಈ ಚಿತ್ರವನ್ನು ಶ್ರೀ ಮಾದೇಶ್ವರ ಪ್ರೊಡಕ್ಷನ್ಸ್ ಮೂಲಕ ಪ್ರಣವ್ ಗೌಡ.ಎನ್, ನಿವೇದಿತಾ ಹಾಗೂ ಶಿವಕುಮಾರ್ ನಿರ್ಮಿಸಿದ್ದಾರೆ.

ಸುಮಧುರ ನಾಲ್ಕು ಹಾಡುಗಳಿರುವ ಈ ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ನೀಡಿದ್ದಾರೆ. ಧರ್ಮವಿಶ್ ಹಿನ್ನೆಲೆ ಸಂಗೀತ “ರಾಜಮಾರ್ತಾಂಡ’ ನ ವೈಭವವನ್ನು ಮತ್ತಷ್ಟು ಹೆಚ್ಚಿಸಿದೆ.
ಜೆ.ಕೆ.ಗಣೇಶ್ ಛಾಯಾಗ್ರಹಣ, ವೆಂಕಟೇಶ್ ಯು ಡಿ ವಿ ಸಂಕಲನ, ವಿನೋದ್, ಪಳನಿರಾಜ್ ಸಾಹಸ ನಿರ್ದೇಶನ ಹಾಗೂ ಭೂಷಣ್, ಹರ್ಷ ಅವರ ಜರ ನಿರ್ದೇಶನ ಈ ಚತ್ರಕ್ಕಿದೆ.

ಚಿರಂಜೀವಿ ಸರ್ಜಾ ಅವರಿಗೆ ನಾಯಕಿಯರಾಗಿ ದೀಪ್ತಿ‌ ಸಾತಿ, ಮೇಘಶ್ರೀ, ತ್ರಿವೇಣಿ (ಟಗರು) ಅಭಿನಯಿದ್ದಾರೆ. ಭಜರಂಗಿ ಲೋಕಿ, ಚಿಕ್ಕಣ್ಣ, ದೇವರಾಜ್, ಸುಮಿತ್ರ, ಶಂಕರ್ ಅಶ್ವಥ್, ವಿನೀತ್ ಕುಮಾರ್ (ಬಾಂಬೆ) ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

Related posts

ದುನಿಯಾ ವಿಜಯ್ ಅಭಿನಯದ ಲ್ಯಾಂಡ್ ಲಾರ್ಡ್ ಚಿತ್ರದ ಆಡಿಯೋ ಹಕ್ಕನ್ನು ಆನಂದ ಆಡಿಯೋ ದಾಖಲೆ ಬೆಲೆಗೆ ಖರೀದಿ

Kannada Beatz

“ಓಲ್ಡ್ ಮಾಂಕ್” ಟ್ರೇಲರ್ ಬಿಡುಗಡೆ ‌ಮಾಡಿದ ಪವರ್ ಸ್ಟಾರ್.

administrator

ಆಕ್ಷನ್ ಪ್ಯಾಕ್ಡ್ ‘ಗಜರಾಮ’ ಟ್ರೇಲರ್ ರಿಲೀಸ್…ಪೈಲ್ವಾನ್ ಅವತಾರದಲ್ಲಿ ಖದರ್ ತೋರಿಸಿದ ರಾಜವರ್ಧನ್*

Kannada Beatz

Leave a Comment

Share via
Copy link
Powered by Social Snap