Kannada Beatz
News

ಬಿಂದ್ಯಾ ಮೂವೀಸ್ ಮೂಲಕ ಹೊಸವರ್ಷಕ್ಕೆ ಬಂತು “ಲಕಲಕ ಲ್ಯಾಂಬರ್ಗಿನಿ”

ಚಂದನ್ ಶೆಟ್ಟಿ ಜೊತೆ ಹೆಜ್ಜೆ ಹಾಕಿದ ರಚಿತಾರಾಂ.

ಕನ್ನಡದಲ್ಲಿ ತಮ್ಮದೇ ಆದ ಶೈಲಿಯ ಗಾಯನದ ಮೂಲಕ ಜನಪ್ರಿಯರಾಗಿರುವ ಚಂದನ್ ಶೆಟ್ಟಿ ಸಾಹಿತ್ಯ ಬರೆದು, ಸಂಗೀತ ನೀಡಿ, ಹಾಡಿ, ಅಭಿನಯಿಸಿರುವ “ಲಕಲಕ ಲ್ಯಾಂಬರ್ಗಿನಿ” ಹಾಡು ಬಿಡುಗಡೆಯಾಗಿದೆ.
ಬಿಂದ್ಯಾ ಮೂವೀಸ್ ಲಾಂಛನದಲ್ಲಿ ಆರ್ ಕೇಶವ್ ಈ ಹಾಡನ್ನು ನಿರ್ಮಿಸಿದ್ದಾರೆ. ನಂದಕಿಶೋರ್ ನಿರ್ದೇಶಿಸಿದ್ದಾರೆ. ಜನಪ್ರಿಯ ನಟಿ ರಚಿತಾರಾಂ ಈ ಹಾಡಿನಲ್ಲಿ ಕಾಣಿಸಿಕೊಂಡಿದ್ದಾರೆ.

ನಿರ್ಮಾಪಕ ಕೆ.ಮಂಜು ಈ ಹಾಡನ್ನು ಬಿಡುಗಡೆ ಮಾಡಿ ಶುಭ ಕೋರಿದರು.

ಹೊಸವರ್ಷದ ಆರಂಭದಲ್ಲಿ ಹೊಸ ಗೀತೆ ಬಿಡುಗಡೆ ಮಾಡುವುದು ವಾಡಿಕೆ. ಕಳೆದ ನಾಲ್ಕು ವರ್ಷಗಳಿಂದ ಹೊಸವರ್ಷಕ್ಕೆ ಟಕೀಲ, ಬ್ಯಾಡ್ ಬಾಯ್, ತ್ರಿ ಪೇಗ್ ಹೀಗೆ.
ಈಗ “ಲಕಲಕ ಲ್ಯಾಂಬರ್ಗಿನಿ”.
ಮೂಲತಃ ರೈತರಾಗಿರುವ ಕೇಶವ್ ಅವರು ತಮ್ಮ ಪುತ್ರಿ ಬಿಂದ್ಯಾ ಹುಟ್ಟುಹಬ್ಬದ ನೆನಪಿಗಾಗಿ ಈ ಹಾಡನ್ನು ನಿರ್ಮಿಸಲು ಮುಂದಾದರು. ಹಾಗೆ ನೋಡಿದರೆ ಈ ಹಾಡು ಜುಲೈ ತಿಂಗಳಲ್ಲಿ ಆರಂಭವಾಗಬೇಕಿತ್ತು. ದುಬೈನಲ್ಲಿ ಚಿತ್ರೀಕರಣ ಮಾಡುವ ಇರಾದೆಯೂ ಇತ್ತು. ಆದರೆ ಕೊರೋನ ಇದಕ್ಕೆಲ್ಲ ಅಡ್ಡಿಯಾಯಿತು. ಕಾಕತಾಳೀಯ ಎಂಬಂತೆ ಹೊಸವರ್ಷಕ್ಕೆ ಈ ಹಾಡು ಬಿಡುಗಡೆಯಾಗಿದೆ. ಹಾಡಿನಲ್ಲಿ ಅಭಿನಯಿಸಿರುವ ರಚಿತಾರಾಂ ಅವರಿಗೆ, ನಿರ್ದೇಶಕ ನಂದಕಿಶೋರ್ ಸೇರಿದಂತೆ ಇಡೀ ತಂತ್ರಜ್ಞರಿಗೆ, ಹೆಚ್ಚಾಗಿ ನಾನು ಇಲ್ಲಿಯವರೆಗೂ ಮಾಡಿರುವ ಸಾಂಗ್ ನಲ್ಲೇ ಅಪಾರವೆಚ್ಚದ ಈ ಹಾಡನ್ನು ನಿರ್ಮಿಸಿದ ನಿರ್ಮಾಪಕರಿಗೆ ನನ್ನ ಧನ್ಯವಾದ. ಹೆಚ್ಚಿನ ಸಂಖ್ಯೆಯಲ್ಲಿ ಈ ಹಾಡನ್ನು ನೋಡುವ ಮೂಲಕ ನಮಗೆ ಪ್ರೋತ್ಸಾಹ ನೀಡಿ ಎಂದರು ಚಂದನ್ ಶೆಟ್ಟಿ.

ನನ್ನ ಆಲೋಚನೆಯಲ್ಲಿ ಇದು ಇರಲ್ಲಿಲ್ಲ.
ನನ್ನ ಮಗಳು ಬಿಂದ್ಯಾಳನ್ನು ಹುಟ್ಟುಹಬ್ಬಕ್ಕೆ ಏನು ಬೇಕು ಎಂದು ಕೇಳಿದಾಗ, ಚಂದನ್ ಶೆಟ್ಟಿ ಜೊತೆ ಡ್ಯಾನ್ಸ್ ಮಾಡಬೇಕು ಎಂದು ಆಸೆಪಟ್ಟಳು. ನಂತರ ಕೆ.ಮಂಜು ಅವರ ಮುಂದೆ ಹೇಳಿದೆ. ಅವರ ಮೂಲಕ ಎಲ್ಲರನ್ನು ಸಂಪರ್ಕಿಸಿದೆ. ಈ ಹಾಡು ನಿರ್ಮಾಣವಾಗಲು ನನ್ನ ಮಗಳು ಬಿಂದ್ಯಾ ಕಾರಣ‌.
ಚಂದನ್ ಶೆಟ್ಟಿ , ರಚಿತಾರಾಂ ಜೊತೆ ನನ್ನ ಮಗಳು ಬಿಂದ್ಯಾ ಕೂಡ ಈ ಹಾಡಿನಲ್ಲಿ ಅಭಿನಯಿಸಿದ್ದಾಳೆ ಎಂದರು ನಿರ್ಮಾಪಕ ಕೇಶವ್.

ನಾನು ಎಷ್ಟೋ ಚಿತ್ರಗಳಿಗೆ ಸಹ ನಿರ್ದೇಶಕನಾಗಿ, ನಿರ್ದೇಶಕನಾಗಿ ಕೆಲಸ ಮಾಡಿದ್ದೀನಿ. ಆಲ್ಬಂ ಸಾಂಗ್ ಇದೇ ಮೊದಲು ನಿರ್ದೇಶನ ಮಾಡಿದ್ದೀನಿ.
ನಿಜಕ್ಕೂ ಮಕ್ಕಳು ಹುಟ್ಟುಹಬ್ಬಕ್ಕೆ ಚಾಕೊಲೇಟ್, ಬಿಸ್ಕತ್ತು ಮುಂತಾದವುಗಳನ್ನು ಕೇಳುತ್ತಾರೆ. ಆದರೆ ಈ ಹುಡುಗಿ ಅವರ ಅಪ್ಪನ ಬಳಿ ಆಲ್ಬಂ ಸಾಂಗ್ ಮಾಡಲು ಕೇಳಿ, ನೂರುಜನಕ್ಕೆ ಅನ್ನ ನೀಡಿದ್ದಾಳೆ. ಚಿಕ್ಕ ವಯಸ್ಸಿನಲ್ಲಿ ಇಂತಹ ಗುಣ ಇರುವುದು
ನಿಜಕ್ಕೂ ಶ್ಲಾಘನೀಯ ಎಂದರು ನಿರ್ದೇಶಕ ನಂದ ಕಿಶೋರ್.

ಶೇಖರ್ ಚಂದ್ರ ಅವರ ಛಾಯಾಗ್ರಹಣ, ಕೆ.ಎಂ.ಪ್ರಕಾಶ್ ಸಂಕಲನ , ಮುರಳಿ ನೃತ್ಯ ನಿರ್ದೇಶನ ಹಾಗೂ ಮೋಹನ್ ಬಿ ಕೆರೆ ಅವರ ಕಲಾ ನಿರ್ದೇಶನ ಈ ಹಾಡಿಗಿದೆ.

ಚಂದನ್ ಶೆಟ್ಟಿ ಪತ್ನಿ ನಿವೇದಿತಾ, ನಿರ್ಮಾಪಕ ಕೇಶವ್ ಅವರ ಪತ್ನಿ ಇಂದಿರಾ ಅವರು ಸಮಾರಂಭದಲ್ಲಿ ಉಪಸ್ಥಿತರಿದ್ದರು.

Related posts

ರಾಗಿಣಿ ಪ್ರಜ್ವಲ್ ಅಭಿನಯದ “ಶಾನುಭೋಗರ ಮಗಳು” ಚಿತ್ರ ಸದ್ಯದಲ್ಲೇ ತೆರೆಗೆ. .

Kannada Beatz

ಸಖತಾಗಿದೆ “ಸಾರಿ” ಚಿತ್ರದ ಲಿರಿಕಲ್ ಸಾಂಗ್.

Kannada Beatz

ಅಫ್ಜಲ್ ಚೊಚ್ಚಲ ನಿರ್ದೇಶನದ “ಹೊಸತರ” ಚಿತ್ರದ ಚಿತ್ರೀಕರಣ ಮುಕ್ತಾಯ.

Kannada Beatz

Leave a Comment

Share via
Copy link
Powered by Social Snap