ನಿನ್ನೆಯಷ್ಟೇ ನಟಿ ರಕ್ಷಿತಾ ಪ್ರೇಮ್ ಅವರ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಯಿತು. ರಕ್ಷಿತಾ ಪ್ರೇಮ್ ಅವರ ಹುಟ್ಟುಹಬ್ಬದ ದಿನದಂದೇ ಅವರ ಸಹೋದರನ ಸಿನಿಮಾದ ಫಸ್ಟ್ ಲುಕ್ ಬಿಡುಗಡೆ ಮತ್ತು ಚಿತ್ರದ ಟೈಟಲ್ ಅನ್ನು ಅನೌನ್ಸ್ ಮಾಡಲಾಯಿತು.
ಇನ್ನು ಈ ಚಿತ್ರದ ಮೂಲಕ ರಕ್ಷಿತಾ ಪ್ರೇಮ್ ಅವರ ಸಹೋದರ ಕನ್ನಡ ಚಿತ್ರರಂಗಕ್ಕೆ ಪದಾರ್ಪಣೆ ಮಾಡಲಿದ್ದಾರೆ. ಈ ಚಿತ್ರಕ್ಕೆ ಖ್ಯಾತ ನಿರ್ದೇಶಕ ಜೋಗಿ ಪ್ರೇಮ್ ಅವರ ನಿರ್ದೇಶನವಿರಲಿದೆ. ಕಳೆದ ವರ್ಷವಷ್ಟೇ ದಿ ವಿಲನ್ ಚಿತ್ರದ ಮೂಲಕ ಯಶಸ್ಸನ್ನು ಕಂಡ ನಿರ್ದೇಶಕ ಜೋಗಿ ಪ್ರೇಮ್ ಅವರು ಇದೀಗ ತಮ್ಮ ಹೋಂ ಬ್ಯಾನರ್ ಅಡಿಯಲ್ಲಿ ಮತ್ತೊಂದು ಸಿನಿಮಾ ನಿರ್ದೇಶನ ಮಾಡುತ್ತಿದ್ದಾರೆ.
ಈ ಚಿತ್ರದ ಫಸ್ಟ್ ಲುಕ್ ಟೀಸರ್ ನಿನ್ನೆ ಬಿಡುಗಡೆಯಾಗಿದ್ದು ಚಿತ್ರಕ್ಕೆ ಏಕ್ ಲವ್ ಯಾ ಎಂದು ಶೀರ್ಷಿಕೆ ಇಡಲಾಗಿದೆ. ಇನ್ನು ಇದೀಗ ಎಲ್ಲೆಡೆ ಚರ್ಚೆಯಾಗುತ್ತಿರುವ ಸುದ್ದಿ ಏನೆಂದರೆ ಈ ಚಿತ್ರಕ್ಕೆ ನಾಯಕಿಯಾಗಿ ಮಲಯಾಳಂ ಬೆಡಗಿ ಸಾಯಿ ಪಲ್ಲವಿ ಅವರನ್ನು ಆಯ್ಕೆ ಮಾಡಲಾಗಿದೆ ಎಂಬುದು. ಹೌದು ರಕ್ಷಿತಾ ಪ್ರೇಮ್ ಅವರ ಸಹೋದರನ ಅಭಿನಯದ ಮೊದಲ ಚಿತ್ರಕ್ಕೆ ಸಾಯಿ ಪಲ್ಲವಿ ಅವರು ಬರಲಿದ್ದಾರೆ ಎಂಬ ಸುದ್ದಿ ಎಲ್ಲೆಡೆ ಹರಿದಾಡುತ್ತಿದೆ. ಜೋಗಿ ಪ್ರೇಮ್ ಅವರು ಸಾಯಿ ಪಲ್ಲವಿ ಅವರನ್ನು ಈ ಚಿತ್ರಕ್ಕೆ ಕರೆಸಲಿದ್ದಾರೆ ಎಂಬ ಸುದ್ದಿ ಇದೀಗ ಎಲ್ಲೆಡೆ ವೈರಲ್ ಆಗುತ್ತಿದೆ.
ಇನ್ನು ಈ ಹಿಂದೆ ಜೋಗಿ ಪ್ರೇಮ್ ಅವರು ಮಲ್ಲಿಕಾ ಶರಾವತ್, ಸನ್ನಿ ಲಿಯೋನ್, ಹ್ಯಾಮಿ ಜಾಕ್ಸನ್ ರಂತಹ ದೊಡ್ಡ ದೊಡ್ಡ ನಟಿಯರನ್ನು ಬೇರೆ ಚಿತ್ರರಂಗದಿಂದ ಕನ್ನಡ ಸಿನಿಮಾಗೆ ಕರೆಸಿದ್ದ ಖ್ಯಾತಿ ಹೊಂದಿದ್ದಾರೆ.