ದೈವಜ್ಞ ಸಮಾಜದ ಹಿರಿಮೆ, ಸಂಸ್ಕೃತಿ ಮತ್ತು ಪಾರಂಪರಿಕ ಮೌಲ್ಯಗಳನ್ನು ಸಾರುವ ‘ದೈವಜ್ಞರು’ ಚಲನಚಿತ್ರದ ಅಧಿಕೃತ ಶೀರ್ಷಿಕೆ (ಟೈಟಲ್) ಹಾಗೂ ಧ್ವನಿಸುರುಳಿಯನ್ನು ಕರ್ಕಿ ಶ್ರೀ ಜ್ಞಾನೇಶ್ವರೀ ಪೀಠದ ಪೀಠಾಧಿಪತಿಗಳಾದ ಪರಮಪೂಜ್ಯ ಶ್ರೀ ಶ್ರೀ ಸಚ್ಚಿದಾನಂದ ಜ್ಞಾನೇಶ್ವರ ಭಾರತೀ ಮಹಾಸ್ವಾಮಿಗಳವರು ಲೋಕಾರ್ಪಣೆಗೊಳಿಸಿ ಆಶೀರ್ವದಿಸಿದರು.
ಸಾಗರ ನಗರದ ದೈವಜ್ಞ ಬ್ರಾಹ್ಮಣ ಸಭಾಭವನದಲ್ಲಿ ವೈಭವದಿಂದ ಜರುಗುತ್ತಿರುವ ಶ್ರೀಗಳವರ 41ನೇ ಚಾತುರ್ಮಾಸ್ಯ ವ್ರತಾಚರಣೆಯ ಧಾರ್ಮಿಕ ಮಹೋತ್ಸವದ ಶುಭ ಸಂದರ್ಭದಲ್ಲಿ ಈ ಕಾರ್ಯಕ್ರಮ ನಡೆಯಿತು. ಸಮಾಜದ ಕಲೆ-ಸಂಸ್ಕೃತಿ ಬಿಂಬಿಸುವ ಸಿನಿಮಾ ಶ್ರೀ ಸಚ್ಚಿದಾನಂದ ಜ್ಞಾನೇಶ್ವರ...
